ಶೃಂಗೇರಿ ಕಿಲ್ಲರ್ ಕಾಡಾನೆ ಸೆರೆ: ಏಕಲವ್ಯ ತಂಡದಿಂದ ಕಾರ್ಯಾಚರಣೆ ಯಶಸ್ವಿ

ಶೃಂಗೇರಿ ಕಿಲ್ಲರ್ ಕಾಡಾನೆ ಸೆರೆ: ಏಕಲವ್ಯ ತಂಡದಿಂದ ಕಾರ್ಯಾಚರಣೆ ಯಶಸ್ವಿ


ಚಿಕ್ಕಮಗಳೂರಿನಲ್ಲಿ ಎರಡು ಸಾವಿಗೆ ಕಾರವಾದ ಕಿಲ್ಲರ್ ಆನೆ

ಚಿಕ್ಕಮಗಳೂರು, ನವೆಂಬರ್ 3: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದು, ಬೆಳೆ ನಾಶ ಮಾಡಿ ಆತಂಕ ಸೃಷ್ಟಿಸಿದ ಕಾಡಾನೆ (ಕಾಡು ಆನೆ) ಕೊನೆಗೂ ಸೆರೆಯಾಗಿದೆ. ಭಾನುವಾರ ಸಂಜೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ ಕೊನೆಗೂ ಹಂತಕ ಆನೆಯನ್ನು ಲಾಕ್ ಮಾಡಿದೆ.

ರಾಜ್ಯ ಸರ್ಕಾರದಿಂದ ಹಂತಕ ಕಾಡಾನೆ ಸೆರೆಗಾಗಿ ಆದೇಶ

ಶುಕ್ರವಾರಕಟ್ಟೆ ಕೆರೆ ಸಮೀಪದ ಕೆರೆಗದ್ದೆ ಗ್ರಾಮದ 44 ವರ್ಷದ ಹರೀಶ್ ಶೆಟ್ಟಿ, 55 ವರ್ಷದ ಉಮೇಶ್ ಗೌಡ ಅವರ ಮೇಲೆ ಕಾಡಾನೆ ದಾಳಿ ಮಾಡಿ ಭೀಕರವಾಗಿ ಕೊಂಡಿತ್ತು. ಇದರಿಂದ ಆಕ್ರೋಶಗೊಂಡ ಜನರು ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಸಾವನ್ನಪ್ಪಿದ ಸ್ಥಳದಿಂದ ಮೃತ ದೇಹ ತೆಗೆಯಲು ಬಿಡದೆ ಸಂಜೆಯವರೆಗೂ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಹಂತಕ ಕಾಡಾನೆ ಸೆರೆಗಾಗಿ ಆದೇಶ ನೀಡಿತ್ತು.

ಭಾನುವಾರ ಸಂಜೆ ಕಿಲ್ಲರ್ ಕಾಡನೆ ಸೆರೆ

ಹಂತಕ ಕಾಡಾನೆ ಸೆರೆ ಕಾರ್ಯಾಚರಣೆಗಾಗಿ ದುಬಾರೆ ಆನೆ ಶಿಬಿರದಿಂದ ಏಕಲವ್ಯ ತಂಡ ಶೃಂಗೇರಿ ತಾಲ್ಲೂಕಿನ ಕೆರೆ ಕಟ್ಟೆ ಕ್ಯಾಂಪ್‌ಗೆ ಬಂದಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಶೃಂಗೇರಿ ತಾಲ್ಲೂಕಿನ ಭಗವತಿ ಪ್ರದೇಶದ ಸಮೀಪದಲ್ಲೇ ಕುಮ್ಕಿ ಆನಗೆಳಿದ್ದವು. ಇದೇ ಪ್ರದೇಶದ ಸಮೀಪ ಕಾಡಾನೆ ಓಡಾಟ ನಡೆಸಿದ್ದು ಭಾನುವಾರ ಸಂಜೆಯ ಕಾರ್ಯಾಚರಣೆ ವೇಳೆ. ಕಿಲ್ಲರ್‌ ಸಲಗದ ಚಾಲನೆಯ ಸುಳಿವು ‌ ಸಿಗುತ್ತಿದ್ದಂತೆ ಅಲರ್ಟ್ ಆದ ಅರಣ್ಯ ಇಲಾಖೆ ಸಿಬ್ಬಂದಿ, ರಾತ್ರಿ ವೇಳೆ ಕಾರ್ಯಾಚರಣೆ. ಭಗವತಿ ಪ್ರದೇಶದ ಬಳಿ ಕಾಡಾನೆಗೆ ಪಶು ವೈದ್ಯರು ಡಾಟ್ ಮಾಡಿದ್ದಾರೆ. ಏಕಲವ್ಯ ನೇತೃತ್ವದ ಹರ್ಷ, ಅಜೇಯ, ಧನಂಜಯ, ಪ್ರಶಾಂತ ಕುಮ್ಕಿ ಆನೆಗಳು ಕಾರ್ಯಾಚರಣೆ ನಡೆಸಿದ್ದು, ಹಂತಕ ಕಾಡಾನೆಯನ್ನು ಲಾಕ್ ಮಾಡಲಾಗಿದೆ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದ ಕಾರ್ಯಾಚರಣೆಯನ್ನು ಭಾನುವಾರ ರಾತ್ರಿಯೇ ನಡೆಸಿದ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಚರಣೆ ಯಶಸ್ವಿಯಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 8:39 am, ಸೋಮ, 3 ನವೆಂಬರ್ 25



Source link

Leave a Reply

Your email address will not be published. Required fields are marked *