ಮಹಿಳಾ ಏಕದಿನ ಪಂದ್ಯದ ಫೈನಲ್ ಸೌತ್ ಆಫ್ರಿಕಾ ತಂಡ ಸೋಲನುಭವಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಸೋಲಿನ ನಡುವೆ ಸೌತ್ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಡ್ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.