Headlines

ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾದ ವಿಜಯಗೀತೆ ಹೇಗಿತ್ತು ನೋಡಿ..!

ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾದ ವಿಜಯಗೀತೆ ಹೇಗಿತ್ತು ನೋಡಿ..!


2025ರ ಮಹಿಳಾ ಏಕದಿನ ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ. ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಈ ಮ್ಯಾಚ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಡಿಯಾ 50 ಪಂದ್ಯಗಳಲ್ಲಿ 7 ರನ್ ಕಳೆದುಕೊಂಡು 298 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಪಂದ್ಯಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್‌ಗಳ ಭರ್ಜರಿ ಜಯ ಸಾಧಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದೆ.

ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಆಟಗಾರ್ತಿಯರು ವಿಶೇಷ ವಿಜಯಗೀತೆಯನ್ನು ಹಾಡುವ ಮೂಲಕ ಸಂಭ್ರಮಿಸಿದರು. ಈ ಹಾಡಿನ ತುಣುಕು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ, ಅಮನ್ಜೋತ್ ಯಾದ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ್ ರಾಣಾ.



Source link

Leave a Reply

Your email address will not be published. Required fields are marked *