ಡಿಸಿಎಂ ಸ್ಥಾನ ಕೊಡೋದಾದ್ರೆ ನಾನ್​ ರೆಡಿ ಎಂದ ಸಚಿವ ಜಮೀರ್​ ಅಹ್ಮದ್​ ಖಾನ್​

ಡಿಸಿಎಂ ಸ್ಥಾನ ಕೊಡೋದಾದ್ರೆ ನಾನ್​ ರೆಡಿ ಎಂದ ಸಚಿವ ಜಮೀರ್​ ಅಹ್ಮದ್​ ಖಾನ್​


ಹಾವೇರಿ, ನವೆಂಬರ್ 03: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು, ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಎರಡೂವರೆ ವರ್ಷ ಮಂತ್ರಿ ಆಗಿದ್ದು, ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡು ಅಂದ್ರೂ ನಾನು ಸಿದ್ಧ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಜೊತೆಗೆ, ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ. 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹಾಕಿದ ಗೆರೆಯನ್ನು ನಾವು ದಾಟುವುದಿಲ್ಲ. ಸಚಿವ ಸಂಪುಟ ಪುನಾರಣೆ ಬಗ್ಗೆ ರಾಜ್ಯ ಕಾಂಗ್ರೆಸ್ ನಲ್ಲಿ ಚರ್ಚೆ ಶುರುವಾಗಿದೆ, ಸಚಿವ ಜಮೀರ್ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *