Bengaluru: ಹತ್ಯೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಜೀವಾವಧಿ ಶಿಕ್ಷೆ

Bengaluru: ಹತ್ಯೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಜೀವಾವಧಿ ಶಿಕ್ಷೆ


ಬೆಂಗಳೂರು, ನವೆಂಬರ್ 04: ಹತ್ಯೆಯಾದವನ ಬರ್ತ್ತೇ ದಿನವೇ ಹಂತಕರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವ ಅಪರೂಪದ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ. 2018 ಜೂನ್‌ನಲ್ಲಿ ನಡೆದ ಪಾಟ್ನಾ ಮೂಲದ ಸಿದ್ಧಾರ್ಥ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಬೆಂಗಳೂರಿನ ಸಿಸಿಹೆಚ್ 59 ನೇ ನ್ಯಾಯಾಲಯದ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 10 ಸಾವಿರ ರೂ.ಗಳನ್ನು ಮೃತನ ತಂದೆಗೆ ಪಾವತಿಸಲು ನ್ಯಾಯಾಲಯ ಸೂಚಿಸಿದೆ.

2018ರ ಜೂನ್ 26ರಂದು, ಸಿದ್ಧಾರ್ಥ್ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ರಾತ್ರಿ 2.45ರ ಸುಮಾರಿಗೆ ಮೂತ್ರ ವಿಸರ್ಜನೆ ವೇಳೆ ಕಾರು ನಿಲ್ಲಿಸಿದಾಗ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಆತನ ಉದ್ದೇಶಪೂರ್ವಕವಾಗಿ ಬೈಕ್‌ನಿಂದ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು, ಆರೋಪಿಗಳು ಸಿದ್ದಾರ್ಥ್‌ಗೆ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಿಸದೆ ಸಿದ್ದಾರ್ಥ್ ಜೂನ್ 28, 2018 ರಂದು ಕಾಣಿಸಿಕೊಂಡಿದ್ದರು. ಬಳಿಕ ಆರೋಪಿಗಳಾದ ಗಿರೀಶ್ ಮತ್ತು ಮಹೇಶ್ ಎಂಬವರನ್ನ ಮೈಕೋಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಕೊಲೆಯಾಗಿರುವ ಸಿದ್ಧಾರ್ಥ್ ಜನ್ಮದಿನವಾದ ಅಕ್ಟೋಬರ್ 24 ರಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ 15 ವರ್ಷದ ಬಾಲಕ

‘ಮಗನ ಸಾವಿಗೆ ನ್ಯಾಯ ಸಿಕ್ಕಿದೆ’

ಕೊಲೆ ಪ್ರಕರಣದ ವಿಚಾರವಾಗಿ ಬೆಂಗಳೂರಿನ ಸಿಸಿಹೆಚ್ 59ನೇ ನ್ಯಾಯಾಲಯಕ್ಕೆ ಆದೇಶ ನೀಡಿರುವ ಮಗನ ಸಾವಿಗೆ ಸಿಕ್ಕ ನ್ಯಾಯ ಎಂದು ಸಿದ್ದಾರ್ಥ್ ಹೇಳಿದ್ದಾನೆ. ನಮ್ಮ ನೋವಿಗೆ ಉತ್ತರ ಸಿಕ್ಕಿದೆ ಎಂದು ಮೃತ ಸಿದ್ಧಾರ್ಥ್ ತಂದೆ ಕೌಶಲೇಂದ್ರ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:33 pm, ಮಂಗಳವಾರ, 4 ನವೆಂಬರ್ 25



Source link

Leave a Reply

Your email address will not be published. Required fields are marked *