ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ಹಾಸನ, ನವೆಂಬರ್ 04: ದೇಶದ 17ನೇ ನೂತನ ಉಪ ರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ (ಸಿಪಿ ರಾಧಾಕೃಷ್ಣನ್)ಅವರು ಇದೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕಕ್ಕೆ (ಕರ್ನಾಟಕ) ಆಗಮಿಸುತ್ತಿದ್ದಾರೆ. ನವೆಂಬರ್ 9 ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಅವರು, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳದ ಮಠದಲ್ಲಿ ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ.
ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಉಪ ರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು, 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಹಾಗೂ ನಾಲ್ಕನೇ ಬೆಟ್ಟದ ಪದನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಇದೇ ನ.28ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಶೇಷತೆ ಏನು ಗೊತ್ತಾ?
ಇದೇ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ವಿರುದ್ಧ ಭರ್ಜರಿ ಜಯ
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಒಟ್ಟು 452 ಮತ ಪಡೆದು ಭರ್ಜರಿ ಬಹುಮತದೊಂದಿಗೆ ಗೆಲುವು ದಾಖಲಿಸಿದ್ದರು. 1957 ರ ಅಕ್ಟೋಬರ್ 20 ರಂದು ತಮಿಳುನಾಡಿನಲ್ಲಿ ಜನಿಸಿದ ಸಿಪಿ ರಾಧಾಕೃಷ್ಣನ್ ಅವರು, ತಮ್ಮ 17 ನೇ ವಯಸ್ಸಿನಲ್ಲಿ ಆರ್ಎಸ್ಎಸ್ ಸೇರ್ಪಡೆಯಾಗಿ ಸ್ವಯಂ ಸೇವಕನಾಗಿ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹಾಸನಾಂಬೆ ದೇಗುಲದ ಬಾಗಿಲು ಬಂದ್: ಈ ವರ್ಷ ಭೇಟಿ ನೀಡಿದ ಭಕ್ತರು ಎಷ್ಟು ಗೊತ್ತಾ? ಸಂಗ್ರಹವಾಯ್ತು ಬರೋಬ್ಬರಿ ಆದಾಯ!
1998ರಲ್ಲಿ ಕೊಯಮತ್ತೂರು ಕ್ಷೇತ್ರದಿಂದ ತಂದರೆ ತಮಿಳುನಾಡಿನಲ್ಲೇ ಏಕಾಂಗಿಯಾಗಿ ಬಿಜೆಪಿಯಿಂದ ಸಂಸತ್ತಿಗೆ ಪ್ರವೇಶಿಸಿದ್ದರು. 2020 ರಿಂದ 2022 ರವರೆಗೆ ಬಿಜೆಪಿಯ ಕೇರಳದ ಉಸ್ತುವಾರಿಯಾಗಿದ್ದರು. ತೆಲಂಗಾಣದ ರಾಜ್ಯಪಾಲರಾಗಿದ್ದ ಸಿ.ಪಿ.ರಾಧಾಕೃಷ್ಣನ್, ಪುದುಚೇರಿ ಎಲ್ಜಿ ಅವರು ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಿದ್ದರು. 2024ರ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ರಾಧಾಕೃಷ್ಣನ್ ಕರ್ತವ್ಯ ನಿರ್ವಹಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.