ಬೆಳಗಾವಿ, ನವೆಂಬರ್ 04: ರಾಜ್ಯದ ಕಬ್ಬು ಬೆಳೆಗಾರರು (ಕಬ್ಬು ರೈತರು) ಸಿಡಿದೆದ್ದಿದ್ದಾರೆ. ತಾವು ಬೆಳೆದ ಪ್ರತಿ ಟನ್ ಕಬ್ಬಿಗೆ 3500 ರೂ. ಕೊಡುವಂತೆ ಇಳಿದಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಹಲವೆಡೆ ಬೀದಿಗೆ ಬಂದಿದೆ. ಇಂದು ರೈತರು ಸರ್ಕಾರಕ್ಕೆ ಕೊಟ್ಟ ಡೆಡ್ಲೈನ್ ಸಹ ಮುಗಿದಿದೆ, ಪಂಜಾಬ್ ಮಾದರಿಯ ಹೋರಾಟಕ್ಕೂ ಮುಂದಾಗಿದ್ದಾರೆ. ಹೀಗಾಗಿ ನವೆಂಬರ್ 7 ರಂದು ರಾಷ್ಟ್ರೀಯ ಹೆದ್ದಾರಿ 4 ಬಂದ್ ಗೆ (ಬಂದ್) ಕರೆ ಮಾಹಿತಿ.
ಹಸಿರು ಸೇನೆಯ ಸಂಘದ ಪೂಜಾ ರಾಜ್ಯಾಧ್ಯಕ್ಷ ಚೂನಪ್ಪರಿ ಹೇಳಿದರು
ಈ ಕುರಿತು ಗುರ್ಲಾಪುರ ಕ್ರಾಸ್‌ನಲ್ಲಿ ಹಸಿರು ಸೇನೆಯ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಹೇಳಿಕೆ ನೀಡಿದ್ದು, ನವೆಂಬರ್ 7ರಂದು ರಾಷ್ಟ್ರೀಯ ಹೆದ್ದಾರಿ ನಾಲ್ಕು ಬಂದ್‌ಗೆ ನಿರ್ಧರಿಸಲಾಗಿದೆ. ಬೆಂಗಳೂರು ಪುಣೆ ಹೆದ್ದಾರಿಗುಂಟ, ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಮಂಡ್ಯ, ಮೈಸೂರು, ಶಿವಮೊಗ್ಗ, ಹಾವೇರಿ, ಧಾರವಾಡದಲ್ಲಿ ಧರಣಿ ಮಾಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡಕ್ಕೂ ರೈತರ ಬೇಡಿಕೆ ಇಟ್ಟಿದ್ದಾರೆ. ಈ ಹಿಂದೆ ಇದ್ದ ಹಳೇ ರಿಕವರಿ ಮಾದರಿಯಲ್ಲಿ ಕಬ್ಬು ಖರೀದಿಸಲು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ರೈತರ ಪಾಲಿಗೆ ಕಹಿಯಾದ ಕಬ್ಬು: ದರ ನಿಗದಿಗೆ ಎಫ್ ಆರ್ ಪಿ ನೆಪ ಹೇಳಿ ಕೇಂದ್ರದೆಡೆಗೆ ಬೊಟ್ಟು ಮಾಡಿದ ಕಾರ್ಖಾನೆಗಳು
ಪ್ರತಿ ಟನ್ ಕಬ್ಬಿಗೆ ಕೇಂದ್ರ, ರಾಜ್ಯ ತಲಾ 5 ಸಾವಿರ ರೂ ತೆರಿಗೆ ತೆಗೆದುಕೊಳ್ಳುತ್ತದೆ. ರಾಜ್ಯ, ಕೇಂದ್ರ ಸರ್ಕಾರ ತಲಾ ಒಂದು ಸಾವಿರ ರೂ ತೆರಿಗೆ ಹಣ ರೈತರಿಗೆ ನೀಡಲಿ. ಸಕ್ಕರೆ ಕಾರ್ಖಾನೆಯಿಂದ 3,500, ಕೇಂದ್ರ, ರಾಜ್ಯದಿಂದ 2 ಸಾವಿರ ರೂ.ನಂತೆ. ಆ ಮೂಲಕ ಪ್ರತಿ ಟನ್ ಕಬ್ಬಿಗೆ 5500 ರೂ. ನೀಡಬೇಕೆಂದು ಮತ್ತೊಂದು ಡಿಮ್ಯಾಂಡ್ ಮಾಡಿದ್ದಾರೆ.
ಕಬ್ಬಿಗೆ ದರ ನಿಗದಿಯಲ್ಲಿ ರಾಜ್ಯ ಸರ್ಕಾರದ ಪಾತ್ರ ಕಡಿಮೆಯಿದೆ: ಸಚಿವ ಶಿವಾನಂದ ಪಾಟೀಲ್
ಇನ್ನು ಈ ವಿಚಾರವಾಗಿ ವಿಜಯಪುರದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದು, ಕೇಂದ್ರ ಸಚಿವ ಅಮಿತ್ ಶಾಗೆ ಮುರುಗೇಶ್ ನಿರಾಣಿ ಪತ್ರ ಬರೆದಿದ್ದಾರೆ. ಸಕ್ಕರೆ ರಫ್ತಾಗುತ್ತಿಲ್ಲ, ಎಥೆನಾಲ್ ಪ್ರೊಡಕ್ಷನ್ ಕಡಿಮೆಯಾಗಿದೆ. ಸರ್ಕಾರ ಕಾರ್ಖಾನೆಗಳು ರೈತರಿಗೆ ಹೆಚ್ಚು ಹಣ ಕೊಡಲು ಕಷ್ಟವಾಗುತ್ತಿದೆ. ಸಕ್ಕರೆ ದರ ಹೆಚ್ಚಾಗುವಂತೆ ಪತ್ರದಲ್ಲಿ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ, ಪ್ರಮುಖ ಭಾಗದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
ರೈತರು ಎಷ್ಟು ಬೇಕಾದರೂ ಬೈಯಲಿ ತಪ್ಪಿಲ್ಲ. ತಪ್ಪು ಕಲ್ಪನೆಯಿಂದ ಬೆಳಗಾವಿ ಜಿಲ್ಲೆಯ ರೈತರಲ್ಲಿ ಗೊಂದಲವಾಗಿದೆ. ಕಬ್ಬು ಬೆಳೆಗಾರರ ಹೋರಾಟದಲ್ಲಿ ವಿಜಯೇಂದ್ರಿದ್ದು ತಪ್ಪಲ್ಲ. ವಿಜಯೇಂದ್ರ, ನಾವು ಒಟ್ಟಾಗಿ ಕೇಂದ್ರದ ಬಳಿ ಹೋಗಿ ಚರ್ಚೆ ಮಾಡೋಣ. ರೈತರ ಪ್ರತಿಭಟನಾ ಸ್ಥಳಕ್ಕೆ ನಾನು ಬೇಕಾದರೂ ಹೋಗುತ್ತೇನೆ. ಕೇಂದ್ರ ಸರ್ಕಾರದ ಮಾರ್ಗದರ್ಶನದೊಂದಿಗೆ ನಡೆದುಕೊಳ್ಳುತ್ತಿದೆ. ಕಬ್ಬಿಗೆ ನಿಗದಿಯಲ್ಲಿ ರಾಜ್ಯ ಸರ್ಕಾರದ ಪಾತ್ರ ಕಡಿಮೆಯಿದೆ.
ಸಚಿವರಿಗೆ ಭಾವಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿದ ರೈತರು
ಇನ್ನು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದ್ದು, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಹೋರಾಟಕ್ಕೆ ಪ್ರತಿಕ್ರಿಯಿಸಿದ ಹಿನ್ನೆಲೆ ಸಚಿವರಿಗೆ ಭಾವಪೂರ್ವ ಶ್ರದ್ಧಾಂಜಲಿ ಅಂತಾ ಬ್ಯಾನರ್ ಧರಣಿ ಮಾಡಿದ್ದು, ಬಳಿಕ ಫೋಟೋ ಸುತ್ತು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬಿನ ಬೆಲೆ ನಿಗದಿ ಆಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಅಂತಾ ಪಟ್ಟು ಹಿಡಿದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.