ಆತ್ಮಹತ್ಯೆಗೆ ಯತ್ನಿಸಿರುವ ರೈತನಿಗೆ ಚಿಕಿತ್ಸೆ.
ಗದಗ, ನವೆಂಬರ್ 05: ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರೇ ವಿಷ ಸೇವಿಸಿ ಆತ್ಮಹತ್ಯೆಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದ ರೈತ ಸಿದ್ದನಗೌಡ ಹಿರೇಗೌಡ್ರು ಆತ್ಮಹತ್ಯೆಗೆ ಯತ್ನಿಸಿದ್ದು, ಸಂಕಟ ತಾಳಲಾರದೆ ನಾಡ ಕಚೇರಿಯಲ್ಲೇ ನರಳಾಡಿದ್ದಾರೆ.
ನಾಲ್ಕು ಕೃಷಿ ಜಮೀನಿನಲ್ಲಿ ಗೋವಿನ ಜೋಳ, ಈರುಳ್ಳಿನ್ನ ಸಿದ್ದನಗೌಡ ಹಿರೇಗೌಡ್ರು ಬೆಳೆದಿದ್ದರು. ಆದರೆ, ಮಳೆ ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬೆಳೆಗೆ ಹಾನಿಯಾಗಿದೆ. ಹೀಗಿದ್ದರೂ ಈ ಬಗ್ಗೆ ಬೆಳೆ ಹಾನಿ ಎಂಟ್ರಿಯಾಗಿಲ್ಲ. ವಿಷಯವನ್ನು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೆ ಗ್ರಾಮ ಲೆಕ್ಕಾಧಿಕಾರಿ ನಿರ್ಲಕ್ಷ್ಯತೋರಿದ್ದಾರೆ ಎಂಬುದು ಆರೋಪ ರೈತನದ್ದು. ಹೀಗಾಗಿ ಮನನೊಂದಿದ್ದ ಸಿದ್ದನಗೌಡ ಹಿರೇಗೌಡ್ರು ನಾಡಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ರೈತ ಮಂಜೇಗೌಡ ಆತ್ಮಹತ್ಯೆ ಪ್ರಕರಣದ ಟ್ವಿಸ್ಟ್: ಮಹತ್ವದ ದಾಖಲೆ ಬಹಿರಂಗ
ವಿಷ ಸೇವಿಸಿದ್ದ ಸಿದ್ದನಗೌಡ ಹಿರೇಗೌಡ್ರನ್ನು ಸ್ಥಳದಲ್ಲಿದ್ದ ರೈತರು ತಕ್ಷಣ ನರಗುಂದ ಆಸ್ಪತ್ರೆಗೆ ಆಯಂಬುಲೆನ್ಸ್ ಮೂಲಕ ಕೊಂಡೊಯ್ದು ದಾಖಲಿಸಿದ್ದಾರೆ. ಆದರೆ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನರಗುಂದ ಡಿವೈಎಸ್ಪಿ ಪ್ರಭು ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಸಿದ್ದನಗೌಡ ಹಿರೇಗೌಡರಿಗೆ ಏನಾದರೂ ಹೆಚ್ಚುಕಮ್ಮಿ ಆದರೆ ಅಧಿಕಾರಿಗಳೇ ಹೊಣೆ ಎಂದು ಈ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ. ವನೀಷಾ (21) ಮೃತ ಯುವತಿ, ಮೃತಳು ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ನಿವಾಸಿ ಎಂಬುದು ಗೊತ್ತಾಗಿದೆ. ಶಿವಮೊಗ್ಗ ಡಿವಿಎಸ್ ಸೈನ್ಸ್ ಕಾಲೇಜ್ ವಿದ್ಯಾರ್ಥಿಯಾಗಿದ್ದ ವನೀಷಾಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.