Headlines

ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!

ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!


ಕಾರ್ನ ಸೀಟ್ ನಡಿ ಪತ್ತೆಯಾದ ಕಂತೆ ಕಂತೆ ಹಣ

ಚಿಕ್ಕಮಗಳೂರು, ನವೆಂಬರ್ 06: ಪೊಲೀಸ್ ಸೀಜ್ ಮಾಡಿದ್ದ ಕಾರಣ ಒಂದು ತಿಂಗಳಿನಿಂದ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿಗೆ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಇದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ಸಚಿವ ದಿ .ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗ್‌ನ ಸಾಂಗ್ಲಿ ಪೊಲೀಸರ ನೆರವು ಪಡೆದು ಬಂಧಿಸಲಾಗಿದೆ. ಈ ವೇಳೆ ಆರೋಪಿಗಳು ಎಸ್ಕೇಪ್ ಆಗಲು ಬಳಸಿದ್ದ ಕಾರನ್ನು ಸೀಜ್ ಮಾಡಲಾಗಿದೆ. ಆದರೆ, ಈಗ ನ್ಯಾಯಾಲಯ ಕಾರನ್ನ ರಿಲೀಸ್ ಮಾಡುವಂತೆ ಸೂಚಿಸಲಾಗಿದೆ. ಈ ಹಿನ್ನಲೆ ಕಾರನ್ನು ಪರಿಶೀಲಿಸುವಾಗ ಹಣ, ಚಿನ್ನ ಮತ್ತು ಬೆಳ್ಳಿ ಇದೆ.

ಕಾರಿನ ಸೀಟ್ ನಡಿ ಚಿನ್ನ, ಬೆಳ್ಳಿ ಪತ್ತೆ

ಪರಿಶೀಲನೆ ವೇಳೆ ಕಾರಿನ ಸೀಟ್ ಅಡಿಯಲ್ಲಿ 595 ಗ್ರಾಂ ಚಿನ್ನ, 589 ಗ್ರಾಂ ಬೆಳ್ಳಿ, 3,41,150 ರೂ. ಹಣ ಇದೆ. ವಶಕ್ಕೆ ಪಡೆಯಲಾದ ಹಣ ಮತ್ತು ವಸ್ತುಗಳ ಮೌಲ್ಯ ಕೋಟಿಗೂ ಅಧಿಕ ಎನ್ನಲಾಗುತ್ತದೆ, ಕಳ್ಳತನವಾಗಿರುವುದರಿಂದ ಅಧಿಕ ಚಿನ್ನ ಮತ್ತು ಬೆಳ್ಳಿ ಈ ವೇಳೆ ಇದೆ. ಹೀಗಾಗಿ ಗ್ಯಾಂಗ್ ಹಲವೆಡೆ ಕೈಚಳಕ ತೋರಿರುವ ಬಗ್ಗೆ ಅನುಮಾನಗಳು ಕಂಡುಬರುತ್ತಿವೆ.

ಇದನ್ನೂ ಓದಿ: ಪತ್ರಿಕೆಗೆ ಆಹ್ವಾನ ನೀಡುವ ನೆಪದದಲ್ಲಿ ಬಂದು ಚಿನ್ನ ಕದ್ದ ಖತರ್ನಾಕ್ ಜೋಡಿ

ಆಗಸ್ಟ್ನಲ್ಲಿ ನಡೆದಿದ್ದ ಕಳ್ಳತನ

ಆ.21ರಂದು ಬೆಳಗಿನ ಜಾವ ಕೊಪ್ಪ ಪೊಲೀಸ್ ಠಾಣ ವ್ಯಾಪ್ತಿಯ ಹರಂದೂರು ಗ್ರಾಮದ ಮಣಿಪುರ ಎಸ್ಟೇಟ್ನ, ಮಾಜಿ ಸಚಿವ ಗೋವಿಂದೇಗೌಡ ಅವರ ಪುತ್ರ ಹಾಗೂ ಎಸ್ಟೇಟ್ ಮಾಲೀಕ ಹೆಚ್.ಜಿ. ವೆಂಕಟೇಶ್ ಮನೆಯಲ್ಲಿ ಕಳ್ಳತನ ನಡೆದಿತ್ತು. 6 ಲಕ್ಷ ನಗದು ಮತ್ತು 37,50,000 ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಆರೋಪಿಗಳಿಗೆ ಬಲೆ ಬೀಸಿದ್ದ ಪೊಲೀಸರು, ಸಾಂಗ್ಲಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ನೇಪಾಳದ ರಾಜೇಂದ್ರ, ಏಕೇಂದ್ರ ಕುಟಲ್ ಬದ್, ಕರಂ ಸಿಂಗ್ ಬಹಾದ್ದೂರ್ ಎಂಬುವರನ್ನು ವಶಕ್ಕೆ ಪಡೆದು ಒಂದೂವರೆ ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 10:21 am, ಗುರುವಾರ, 6 ನವೆಂಬರ್ 25



Source link

Leave a Reply

Your email address will not be published. Required fields are marked *