Headlines

ಗೆದ್ದ ಕ್ಯಾನ್ಸರ್, ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಗೆದ್ದ ಕ್ಯಾನ್ಸರ್, ಖ್ಯಾತ ಖಳನಟ ಹರೀಶ್ ರಾಯ್ ನಿಧನ


ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಸತತ ಹೋರಾಟ ಮಾಡುತ್ತಲೇ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಲಾಗಿತ್ತು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನರಾದರು.

ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಶಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯರು. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡುವಂತೆ ಹರೀಶ್ ರಾಯರು ಹೇಳಿದ್ದಾರೆ.

ಇದನ್ನೂ ಓದಿ:ದರ್ಶನ್ ಸ್ಥಿತಿ ನೆನೆದು ಕಣ್ಣೀರು ಹಾಕಿದ ನಟ ಹರೀಶ್ ರಾಯ್

ಹಲವಾರು ಮಂದಿ ಸಿನಿಮಾ ಮಂದಿ ಹೋಗಿ ಹರೀಶ್ ರಾಯ್ ಅವರನ್ನು ಮಾತನಾಡಿಸಿ ತಾವು ಜೊತೆಗೆ ಇರುವುದಾಗಿ ಭರವಸೆ ನೀಡಿದ್ದರು. ಹಲವು ಯೂಟ್ಯೂಬರ್ಗಳು ಸಹ ಹೋಗಿದ್ದರು. ಕಳೆದ ಕೆಲವು ತಿಂಗಳುಗಳಿಂದಲೂ ಸತತವಾಗಿ ಪಡೆಯುತ್ತಲೇ ಇದ್ದರು ಹರೀಶ್ ರಾಯರು. ಇದೀಗ ಕೊನೆಗೆ ನಿಧನರಾದರು.

ಕರಾವಳಿಯ ಮೂಲಕ ಹರೀಶ್ ರಾಯ್ ಅವರು 90 ಹಲವು ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ ಹರೀಶ್ ರಾಯರು ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನೆಸಿಕೊಂಡು ಕಣ್ಣೀರು ಹಾಕಿದ್ದರು. ಹರೀಶ್ ರಾಯರು ಅವರ ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ರಾಯ್ ಅವರು ಕನ್ನಡದಲ್ಲಿಯೇ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೇದ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಕನಸಿನ ಹಕ್ಕಿ, ತಾಯವ್ವ, ಓಮ್ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿ2ಎಫ್ ನಲ್ಲಿ ನಟಿಸಿರುವ ಚಾಪ್ಟರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 11:53 am, ಗುರು, 6 ನವೆಂಬರ್ 25



Source link

Leave a Reply

Your email address will not be published. Required fields are marked *