ಬೆಳಗಾವಿ, ನವೆಂಬರ್ 06: ಕಬ್ಬಿಗೆ ಬೆಲೆ ನಿಗದಿಗೆ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪದಲ್ಲಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಪಟ್ಟಣ ಸಂಪೂರ್ಣ ಬಂದ್ ಆಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ವರ್ತಕರು ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಅಂಕಲಗಿ ಶಾಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಜನ ಸಂಚಾರವಿಲ್ಲದೆ ಪಟ್ಟಣದ ರಸ್ತೆಗಳು ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡುಬಂದಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.