ಬೆಂಗಳೂರು, ನವೆಂಬರ್ 6: ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ರೆನೆ ಜೋಶಿಲ್ದಾ ಎಂಬಾಕೆಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ವಿಚಾರವೆಂದರೆ, ಆಕೆ ಯುವಕನೊಬ್ಬನನ್ನು ಪ್ರೀತಿಸಿದಳು. ಯುವಕ ಆಕೆಯ ಪ್ರೀತಿಯನ್ನು ನಿರಾಕರಿಸಿದ್ದ. ಹೀಗಾಗಿ ಯುವಕನನ್ನು ಸಿಲುಕಿಸುವ ಉದ್ದೇಶದಿಂದ ಆಕೆ ಸಂಚು ಹೂಡಿದ್ದಳು. ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲು ಉದ್ದೇಶಿಸಿದ್ದಳು. ಆಕೆ ವಿಪಿಎನ್ ಬಳಸಿ ಬೆದರಿಕೆ ಇ-ಮೇಲ್ ಕಳುಹಿಸಿರುವುದು ಇದೆ. ಗೇಟ್ ಕೋಡ್ ಎಂಬ ಅಪ್ಲಿಕೇಷನ್ ಮೂಲಕ ವರ್ಚುವಲ್ ಮೊಬೈಲ್ ನಂಬರ್ ಪಡೆದು ಕೃತ್ಯ ಎಸಗಿರುವುದು ಗೊತ್ತಾಗಿದೆ.
ಬಂಧಿತ ಮಹಿಳೆ ಬಳಿ 7 ವಾಟ್ಸ್ ಆಪ್ ಖಾತೆಗಳು ಇವೆ. ಈ ಹಿಂದೆಯೂ ಬಾಂಬ್ ಬೆದರಿಕೆ ಕೇಸ್ ನಲ್ಲಿ ಮಹಿಳೆಯ ಬಂಧನವಾಗಿತ್ತು. ಬಂಧಿಸಿದ್ದರು. ಆಕೆಯ ವಿರುದ್ಧ ದೇಶದ ಹಲವೆಡೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲವು ವಾರಗಳ ಹಿಂದೆ ಬೆಂಗಳೂರಿನ 7 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಇದರಿಂದ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿತ್ತು. ಶಾಲಾ ಆವರಣಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಸಿ ಯಾವುದೇ ಸ್ಫೋಟಕ ವಸ್ತುಗಳು ಸಿಕ್ಕಿಲ್ಲವೆಂದು ಸ್ಪಷ್ಟಪಡಿಸಿದರು.
ಘಟನೆಯ ನಂತರ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ತನಿಖೆ ಕೈಗೊಂಡರು, ಆ ಇಮೇಲ್‌ಗಳ ಮೂಲವನ್ನು ಪತ್ತೆಹಚ್ಚಿದರು. ತನಿಖೆ ವೇಳೆ ಆ ಇ-ಮೇಲ್‌ಗಳು ಬೆಂಗಳೂರಿಗಷ್ಟೇ ಅಲ್ಲದೆ ಚೆನ್ನೈ, ಹೈದರಾಬಾದ್ ಮತ್ತು ಗುಜರಾತ್‌ನ ಕೆಲವು ಶಾಲೆಗಳು ಕಳುಹಿಸಲ್ಪಟ್ಟವು ಎಂಬುದೂ ಬಹಿರಂಗವಾಗಿತ್ತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ