ಸಚಿವ ಪ್ರಲ್ಹಾದ್ ಜೋಶಿ, ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 07: ಸಿಎಂ ಹುದ್ದೆ ಹೊಯ್ದಾಟದಲ್ಲಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ಏನೇನೋ ಬಡಬಡಿಸುತ್ತಿದ್ದಾರೆ. ಸರಿಯಾದ ದತ್ತಾಂಶ, ಅಧಿಕಾರಿಗಳಿಂದ ನೈಜ ಮಾಹಿತಿ ಪಡೆದು ಮಾತನಾಡಬೇಕೆಂಬ ಪರಿಜ್ಞಾನ ಸಿಎಂಗೆ ಇಲ್ಲದಿರುವುದು ರಾಜ್ಯದ ದುರಂತ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (ಪ್ರಹ್ಲಾದ ಜೋಶಿ) ತಿರುಗೇಟು ನೀಡಿದ.
ಈ ಕುರಿತಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಎಥೆನಾಲ್ ಹಂಚಿಕೆಯ ತಮ್ಮ ಮಾಹಿತಿಯೇ ಸುಳ್ಳು ಎಂದಿರುವ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದ್ದು, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಪರದಾಡ ಸಿಎಂ ಹತಾಶೆಯಲ್ಲಿ ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ. ಸತ್ಯಾಂಶ ಅರಿತೋ-ಅರಿಯದೆಯೋ ಬರೀ ಸುಳ್ಳೆಂಬ ಮರಳಿನ ಅರಮನೆ ಕಟ್ಟುತ್ತಿರುವವರು ಅವರೇ ಎಂದು ಚಾಟಿ ಬೀಸಿದ್ದಾರೆ.
ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್
ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳುವ ಪರದಾಡುತ್ತಾ ಹತಾಶೆಯಲ್ಲಿರುವ ಮುಖ್ಯಮಂತ್ರಿ @ಸಿದ್ದರಾಮಯ್ಯ ನವರು, ಮನಸ್ಸೊ ಇಚ್ಛೆ ಮಾತಾನಾಡುತ್ತಾ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ.
ಸಿದ್ದರಾಮಯ್ಯನವರು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿ, ಕೇಂದ್ರದ ಮೇಲೆ ಬೆರಳು ತೋರಿ… pic.twitter.com/pWdem1CyCP
– ಪ್ರಲ್ಹಾದ್ ಜೋಶಿ (@JoshiPralhad) ನವೆಂಬರ್ 7, 2025
ಸಿದ್ದರಾಮಯ್ಯನವರು ನಮೂದಿಸಿದ ಸಂಸತ್ತಿನ ಉತ್ತರದಲ್ಲಿ 30.06.25 ರ ಅವಧಿಯ ದತ್ತಾಂಶ ಮಾತ್ರ ಇದೆ. ಆದರೆ, ಎಥೆನಾಲ್ ಸರಬರಾಜು ವರ್ಷವು ನವೆಂಬರ್‌ನಿಂದ ಪ್ರಾರಂಭವಾಗಿ ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ. ಸಂಸತ್ತಿನಲ್ಲಿ ನೀಡಲಾದ ದತ್ತಾಂಶವು 30.06.2025 ರದ್ದಾಗಿದ್ದು ಮಾತ್ರ.
2024-25 ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಒಟ್ಟು 139.8 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಸಿವೆ. ಮುಖ್ಯಮಂತ್ರಿಗಳು ತಾವು ಮಾತನಾಡುವ ಮೊದಲು, ದತ್ತಾಂಶಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ, ತಮ್ಮ ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದು, ಅರ್ಥಮಾಡಿಕೊಂಡು ನಂತರ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಇರುವುದು ನಿಜಕ್ಕೂ ರಾಜ್ಯದ ದುರಂತ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕಬ್ಬು ಬೆಳಗಾರರ ಹೋರಾಟ: ಪ್ರಧಾನಿಗೆ ಸಿಎಂ ಪತ್ರ; ಸಿದ್ದರಾಮಯ್ಯಗೆ ಜೋಶಿ ಟಕ್ಕರ್
2004-2014 ರ ಸಾಲಿನಲ್ಲಿ ಕಬ್ಬು ಬೆಳೆದ ರೈತರಿಗೆ ಸರಿಯಾದ ಸಮಯದಲ್ಲಿ ಹಣ ಪಾವತಿಯಾಗಬೇಕು, ಈ ವಿಳಂಬ ಧೋರಣೆಯಿಂದ ರೈತರು ಸಂಕಷ್ಟದಲ್ಲಿದ್ದರು. ಅತಿ ಕಡಿಮೆ ಎಫ್‌ಆರ್‌ಪಿ, ಎಂಎಸ್‌ಪಿ, 2005 ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪವನ್ನು ಮಾಡಿದ್ದರೂ, ಎಥೆನಾಲ್ ಬಗ್ಗೆ ಕಿಂಚಿತ್ತೂ ಯೋಚನೆಯೂ ಮಾಡಿರಲಿಲ್ಲ.
ಇದು ನಮ್ಮ ಸರ್ಕಾರದ ಬದ್ದತೆ
2013-14 ರಲ್ಲಿ ಕಬ್ಬು ಬೆಳೆ ಖರೀದಿ 57,104 ಕೋಟಿ ರೂ.ಗಳಷ್ಟಿತ್ತು, ಆದರೆ 2024-25ರ ಮೌಲ್ಯ 1,02,687 ಕೋಟಿ ರೂ. ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಮೂಲಕ 2013-14 ರಲ್ಲಿ 210 ರೂ.ಗಳಷ್ಟಿತ್ತು, ಆದರೆ 2025-26ರ ಸಕ್ಕರೆ ಹಂಗಾಮಿನಲ್ಲಿ ಶೇ. 10.25%ರಷ್ಟು ಪ್ರಗತಿಯಲ್ಲಿದೆ 355/ಕ್ವಿಂಟಲ್‌ಗೆ ಏರಿಕೆಯಾಗಿದೆ. ಇದು ನಮ್ಮ ಸರ್ಕಾರದ ಬದ್ದತೆ ಸಿದ್ದರಾಮಯ್ಯನವರೇ ಎಂದು ಹೇಳಿದ್ದಾರೆ.
ಹೆಚ್ಚುವರಿ ಸಕ್ಕರೆಯನ್ನು ಸಮತೋಲನಗೊಳಿಸಲು ಎಥೆನಾಲ್ ಮಿಶ್ರಣವನ್ನು ಮಾಡಲಾಗುತ್ತಿದೆ. 2013-14 ರಿಂದ 2024-25 ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು ಒಎಂಸಿಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗುತ್ತದೆ.
2013-14 ರಿಂದ, ಕಬ್ಬು ಆಧಾರಿತ ಡಿಸ್ಟಿಲರಿಗಳು ಮತ್ತು ಧಾನ್ಯ ಆಧಾರಿತ ಡಿಸ್ಟಿಲರಿಗಳು 2.18 ಲಕ್ಷ ಕೋಟಿಗಿಂತ ಹೆಚ್ಚು ಆದಾಯವನ್ನು ಗಳಿಸಿವೆ, ಇದರಲ್ಲಿ ಕಬ್ಬು ಆಧಾರಿತ ಡಿಸ್ಟಿಲರಿಗಳು (26.10.2025 ರಂತೆ) OMC ಗಳಿಗೆ ಎಥೆನಾಲ್ ಮಾರಾಟದಿಂದ 1.29 ಲಕ್ಷ ಕೋಟಿ ಗಳಿಸಿವೆ, ಇದು ಕಬ್ಬಿನ ಗಿರಣಿ ರೈತರ ಕಬ್ಬಿನ ಬಾಕಿಯನ್ನು ಹೊಂದಿದೆ ರಫ್ತುಗಳನ್ನು ಸಕಾಲಿಕವಾಗಿ ಅನುಮತಿಸಲಾಗಿದೆ.
ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಚರ್ಚೆ ಮಾಡಿದ್ದೇನು?
ಸಕ್ಕರೆ ಬೆಲೆಯಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ನಮ್ಮ ಸರ್ಕಾರದ ಬದ್ದತೆ. ಕಳೆದ 10 ವರ್ಷದ 10 LMT ಗೆ ಅವಕಾಶ ನೀಡಲಾಯಿತು, ಈ ವರ್ಷ 15 LMT ಗೆ ಅವಕಾಶ ನೀಡಲಾಗುತ್ತಿದೆ. ಇಡೀ ದೇಶಕ್ಕೆ ಒಂದು ನೀತಿಯನ್ನು ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ನೀವು ರಾಜ್ಯದಲ್ಲಿ ಬೆಳೆಗಾರರ ಬೇಡಿಕೆಯ ಪ್ರಕಾರ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿ ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆಯನ್ನು ಕರ್ನಾಟಕದಲ್ಲಿ ನಿರ್ಮಿಸಿಕೊಂಡು ರೈತರನ್ನು ಬೀದಿಗೆ ತಳ್ಳುವ ನೀಚ ಕೆಲಸ ಮಾಡಿದ್ದೀರಾ ಎಂದು ವಾಗ್ದಾಳಿ ನಡೆಸಲಾಗಿದೆ.
ಕಾಂಗ್ರೆಸ್ ದುರಾಡಳಿತದ ಪರಮಾವಧಿ-ರೈತರು ಬೀದಿಗೆ
ಎಂದು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿ, ಇದೀಗ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದೇ ನಿಮ್ಮ ಮೂಲಭೂತ ಕೆಲಸವಾಗಿದೆಯಾ ಸಿದ್ದರಾಮಯ್ಯನವರೇ? ಗ್ಯಾರಂಟಿಗಳು ಮಾತ್ರ ನಿಮ್ಮ ಸರ್ಕಾರದ ಆಡಳಿತವು ಹೊರೆಯಾಗಿದೆ ರಾಜ್ಯದ ಅಭಿವೃದ್ಧಿಯಲ್ಲ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಕರ್ನಾಟಕದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.