Headlines

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ರೀತಿಯಲ್ಲೇ ಮಂಗಳೂರಿನ ಉದ್ಯಮಿ ಪುತ್ರ ಸಾವು!

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ರೀತಿಯಲ್ಲೇ ಮಂಗಳೂರಿನ ಉದ್ಯಮಿ ಪುತ್ರ ಸಾವು!


ಮಂಗಳೂರು, ನವೆಂಬರ್ 07: ನಗರದ ಉದ್ಯಮಿಯ ಪುತ್ರನ (ಉದ್ಯಮಿ ಮಗ) ಮೃತದೇಹ ಶಾಂಭವಿ ನದಿ ತೀರದಲ್ಲಿ ಪತ್ತೆ ಆಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಬಳಿ ನಡೆದಿದೆ. ಉದ್ಯಮಿ ನವೀನ್ ಚಂದ್ರ ಆಳ್ವ ಪುತ್ರ ಅಭಿಷೇಕ್ ಆಳ್ವ (29) ಮೃತ ಯುವಕ. ಮುಲ್ಕಿ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ (ಸಾವು) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಅಭಿಷೇಕ್, ನವೆಂಬರ್ 5ರ ರಾತ್ರಿ ಮೂಲ್ಕಿ ಬಪ್ಪನಾಡು ಬ್ರಿಡ್ಜ್ ಬಳಿ ತಮ್ಮ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಬಪ್ಪನಾಡು ಸಮೀಪ ನದಿ ತೀರದಲ್ಲಿ ಮೃತದೇಹ ಪತ್ತೆ ಆಗಿದೆ. ಅಭಿಷೇಕ್ ತಮ್ಮ ತಂದೆಯ ಉದ್ಯಮವನ್ನು ಮುನ್ನಡೆಸುವಂತಹ ಮಾಹಿತಿಯಿದೆ.

ಇದನ್ನೂ ಓದಿ: ಹೆತ್ತ ಕರುಳನ್ನೇ ಕತ್ತರಿಸಿದ ಮಗ: ಹತ್ಯೆ ಮಾಡಿ ನಾಟಕವಾಡಿದ್ದ ನಿವೃತ್ತ ಸರ್ಕಾರಿ ನೌಕರ ಬಂಧನ

ತಿರುವೈಲು ಗುತ್ತು ಕರಾವಳಿ ಕಂಬಳದಲ್ಲಿ ಗುರುತಿಸಿಕೊಂಡಿದ್ದ ಪ್ರಖ್ಯಾತ ಮನೆತನ. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಲೋಕೇಶ್ ಎಂಬುವರ ಪುತ್ರ ಗಗನ್(14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಇದನ್ನೂ ಓದಿ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಪತಿ! ಅಮಲೇನಾಯ್ತು?

ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಎಂದಿನಂತೆ ಶಾಲೆಗೆ ತೆರಳಿ ವಾಪಸ್ ಆಗಿದ್ದ. ನಿನ್ನೆ ಸಂಜೆ ಶಾಲೆಯಿಂದ ವಾಪಸಾಗಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಡಬ ಪೊಲೀಸ್ ಠಾಣಾ ಪ್ರಕರಣ ನಡೆದಿದೆ.

ಆಟೋ ಪಲ್ಟಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಬಳಿ ಆಟೋ ಪಲ್ಟಿಯಾಗಿ ಕಾಲೇಜು ವಿದ್ಯಾರ್ಥಿನಿ ಪ್ರೇಮಾ(18) ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಐವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಗ ನಗರ ಪೊಲೀಸ್ ಠಾಣಾಾವತಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:00 pm, ಶುಕ್ರ, 7 ನವೆಂಬರ್ 25



Source link

Leave a Reply

Your email address will not be published. Required fields are marked *