ಮೆಟ್ರೋ ಪ್ರಯಾಣಿಕರಿಗೆ ಕಹಿ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್

ಮೆಟ್ರೋ ಪ್ರಯಾಣಿಕರಿಗೆ ಕಹಿ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್


ಬೆಂಗಳೂರು, ನವೆಂಬರ್ 07: ಪ್ರತಿದಿನ ಎರಡೂವರೆ ಸಾವಿರ ಹೊಸ ವಾಹನಗಳು ನೋಂದಣಿ ಆಗುತ್ತಿವೆ. ಹೀಗಾಗಿ ಪ್ರತಿದಿನ ಟ್ರಾಫಿಕ್ ಸಮಸ್ಯೆ (ಟ್ರಾಫಿಕ್ ಸಮಸ್ಯೆ) ಹೆಚ್ಚಾಗುತ್ತಿದೆ. ಆದರೆ ಇದಕ್ಕೆ ಬ್ರೇಕ್ ಹಾಕಬೇಕಿದ್ದ ಪ್ರಮುಖ ಮೆಟ್ರೋ ಮಾರ್ಗವನ್ನು ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಶಾಶ್ವತವಾಗಿ ಕೈಬಿಡಲು ಮುಂದಾಗಿದೆ.

ನಗರದ ಎಲ್ಲಾ ಏರಿಯಾಗಳನ್ನು ಎಲ್ಲಾ ಮೆಟ್ರೋ ಮಾರ್ಗಗಳನ್ನು ಸಂಪರ್ಕಿಸುವ ಏಕೈಕ ಮೆಟ್ರೋ ಮಾರ್ಗವಾಗಲಿ, ಇನ್ನರ್ ರಿಂಗ್ ಮೆಟ್ರೋ ಯೋಜನೆ ಶಾಶ್ವತವಾಗಿ ಕೈಬಿಡುವ ಸಾಧ್ಯತೆಯಿದೆ. ಹೀಗಾಗಿ ಇದು ಮೆಟ್ರೋ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಿತ್ತಳೆ ಮಾರ್ಗಕ್ಕಾಗಿ ಸಾವಿರಾರು ಮರಗಳ ಮಾರಣಹೋಮಕ್ಕೆ ಮುಂದಾದ BMRCL: ಸಿಡಿದೆದ್ದ ಪರಿಸರ ಪ್ರೇಮಿಗಳು

ಮಹಾಲಕ್ಷ್ಮೀ ಲೇಔಟ್ ಮೆಟ್ರೋ ಸ್ಟೇಷನ್ ನಿಂದ ಕುವೆಂಪು ರಸ್ತೆ ಮೆಟ್ರೋ ಸ್ಟೇಷನ್ ವರೆಗೆ ಈ ಇನ್ ರಿಂಗ್ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲು ತಜ್ಞರು ಸಿದ್ದಪಡಿಸಿದ್ದಾರೆ. ಐಐಎಸ್ ಸಿ ಪ್ರೊ. ಆಶಿಷ್ ವರ್ಮ ನೇತೃತ್ವದಲ್ಲಿ ನಗರದೊಳಗೆ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಸಿದ್ದಪಡಿಸಿದ್ದ ಸಂಪೂರ್ಣ ಅಂಡರ್ ಗ್ರೌಂಡ್ ಮೆಟ್ರೋ ಯೋಜನೆ ಇದು. ಇನ್ನರ್ ರಿಂಗ್ ಮೆಟ್ರೋವನ್ನು ಹಂತ- 3 ರಿಂದ ಸದ್ಯ ಕೈ ಬಿಡಲಾಗಿದೆ. ಇದರಿಂದ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಬೀಳಲಿದೆ ಎಂದು ಇಂಜಿನಿಯರ್ ಲೋಹೀತ್ ಕುಮಾರ್ ಹೇಳಿದ್ದಾರೆ.

ಈ ಇನ್ನರ್ ರಿಂಗ್ ಮಾರ್ಗವು 34 ಕಿಮೀ, 24 ಮೆಟ್ರೋ ಸ್ಟೇಷನ್, 6 ಇಂಟರ್ ಚೇಂಜ್ ಮೆಟ್ರೋ ಸ್ಟೇಷನ್ ಮಾಡಲು ಪ್ಲ್ಯಾನ್ ಮಾಡಲ್ಪಟ್ಟಿದೆ. ರಾಜ್ಯ ಸರ್ಕಾರ ನಗರದೊಳಗೆ ಟ್ರಾಫಿಕ್ ಕಡಿಮೆ ಮಾಡುವ ಇನ್ನರ್ ರಿಂಗ್ ಮೆಟ್ರೋ ಬದಲಿಗೆ ಬೆಂಗಳೂರು ಹೊರವಲಯದಲ್ಲಿರುವ ತುಮಕೂರು, ದೇವನಹಳ್ಳಿ, ಹಾರೋಹಳ್ಳಿ, ಅತ್ತಿಬೆಲೆ, ಬಿಡದಿ, ತಾವರೆಕೆರೆ, ಹೊಸಕೋಟೆ ಮತ್ತು ಜಿಗಣಿಗೆ ಮೆಟ್ರೋ ಮಾರ್ಗಗಳ ಫಿಸಿಬಿಲಿಟಿ ಸ್ಟಡಿ ಮಾಡಲು ಸರ್ಕಾರ ಆದೇಶ ನೀಡಿದೆ.

ಪ್ರಯಾಣಿಕರು ಅಸಮಾಧಾನ

ಈ ಇನ್ನರ್ ಮೆಟ್ರೋ ಆರಂಭಗೊಂಡಿದ್ದರೆ ನಗರದ ಒಳಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಾರ ಸಮಸ್ಯೆ ಬಗೆಹರಿಯುತ್ತಿದೆ. ಆದರೆ ಯೋಜನೆ ಕೈಬಿಟ್ಟಿದ್ದು ಸರಿಯಲ್ಲ ಎಂದು ಪ್ರಯಾಣಿಕರಾದ ಪರಮೇಶ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಸಂಪರ್ಕಕ್ಕೆ ಕೊಕ್: ಹೊಸೂರು ಮೆಟ್ರೋ ಯೋಜನೆ ಕೈಬಿಟ್ಟ ಬಿಎಂಆರ್ ಸಿಎಲ್

ಒಟ್ಟಿನಲ್ಲಿ ನಗರದೊಳಗಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡಬೇಕಾಗಿತ್ತು ಇನ್ನರ್ ರಿಂಗ್ ಮೆಟ್ರೋ ಯೋಜನೆ ಮಾಡಲು ಬಿಎಂಆರ್ ಸಿಎಲ್ ಅಧಿಕಾರಿಗಳು ಯಾಕೋ ಮನಸ್ಸು ಮಾಡುವಂತೆ ಕಾಣುತ್ತಿಲ್ಲ. ಆದರೆ ಈ ಮಾರ್ಗ ಓಪನ್ ಆಗಿದ್ದರೆ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾಗುವುದರಲ್ಲಿ ಯಾವುದೇ ಅನುಮಾನವಿರಲಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *