
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆದರು.

ನವೆಂಬರ್ 8 ಮತ್ತು 9 ರಂದು ನಡೆಯಲಿರುವ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಉಪನ್ಯಾಸ ಕಾರ್ಯಕ್ರಮ ಹಿನ್ನೆಲೆ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಈ ವೇಳೆ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಪಥಸಂಚಲನ ಸೇರಿದಂತೆ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ನಡೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೆಂಡೆ, ಕ್ಷೇತ್ರೀಯ ಪ್ರಚಾರಕ ಭರತ್ ಕುಮಾರ್.
ರಂದು ಪ್ರಕಟಿಸಲಾಗಿದೆ – 10:34 pm, ಶುಕ್ರ, 7 ನವೆಂಬರ್ 25