ಬೆಂಗಳೂರು, ನವೆಂಬರ್ 08: ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ವೈರಿಂಗ್ ತಂತಿ ತಗುಲಿದ ಪರಿಣಾಮ, ಸ್ವಲ್ಪ ದೂರ ಲಾರಿ ಎಳೆದೊಯ್ದಿತ್ತು. ಈ ಸಮಯದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ತಾಯಿಯ ಕಣ್ಣೆದುರೇ ಮಗು ಸಾವನ್ನಪ್ಪಿರುವ ಘಟನೆ ಕುಂಡಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಮೃತ ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ ಎಂದು ಗುರುತಿಸಲಾಗಿದೆ. ಮಗುವಿಗೆ ಒಂದು ವರ್ಷ 8 ತಿಂಗಳು. ನ.7ರ ಸಂಜೆ ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿ ಹೋಗುತ್ತಿತ್ತು.
ಈ ವೇಳೆ ಮೇಲೆ ಹಾದು ಹೋಗಿರುವ ವೈರಿಂಗ್ ವಿದ್ಯುತ್ ತಂತಿ ಲಾರಿಗೆ ಸಿಲುಕಿದೆ. ತಕ್ಷಣ ಸ್ಥಳೀಯರು ಕೂಗಿದ್ದಾರೆ. ಆದರೆ ಚಾಲಕ ಗಮನಿಸದೇ ಲಾರಿ ಚಲಾಯಿಸಲು ವೈರಿಂಗ್ ಕಂಬ ಕಿತ್ತು ಬಂದಿದೆ. ಮನೆಯ ಗೋಡೆ ಕುಸಿದು ಆಟ ಆಡ್ತಿದ್ದ ಮಗುವಿನ ಮೇಲೆ ಬಿದ್ದಿದೆ. ಈ ಘಟನೆ ನಡೆದ ಕೂಡಲೇ ಲಾರಿ ಚಾಲಕ ವಾಹನವನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಒಂದು ಅಮಾಯಕ ಜೀವ ಬಲಿ, ಒಂದು ಅಮಲನ ಕಳೆದುಕೊಂಡ ಪೋಷಕರ ಗೋಳಾಟ ಮನಕಲಕುವಂತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ