ಪೂರ್ಣಾವಧಿ ಸಿಎಂ ಎಂದ ಬಳಿಕ ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ!

ಪೂರ್ಣಾವಧಿ ಸಿಎಂ ಎಂದ ಬಳಿಕ ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ!


ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 10: ಕರ್ನಾಟಕ ಕಾಂಗ್ರೆಸ್ (ಕಾಂಗ್ರೆಸ್) ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಚರ್ಚೆ ಕಳೆದ ಕೆಲವು ತಿಂಗಳುಗಳಿಂದ ಜೋರಾಗಿದೆ. ಜೊತೆಗೆ, ನವಂಬರ್ ಕ್ರಾಂತಿ ಕೂಡ ಸದ್ದು ಮಾಡುತ್ತಿದೆ. ಹಲವು ಬಾರಿ, ತಾವೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಹೇಳುತ್ತಾ ಬರುತ್ತಿದ್ದ ಸಿದ್ದರಾಮಯ್ಯ (ಸಿದ್ದರಾಮಯ್ಯ) ಕೆಲವು ದಿನಗಳ ಹಿಂದಷ್ಟೇ ಮೈಸೂರಿನಲ್ಲಿ ”ಹೈಕಮಾಂಡ್ ತೀರ್ಮಾನಿಸಿದರೆ” ಎಂದು ಹೇಳಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮುಖ್ಯಮಂತ್ರಿಗಳ ಮತ್ತೊಂದು ಹೇಳಿಕೆ, ಊಹಾಪೋಹಗಳಿಗೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ವಿಜಯಪುರ ಜಿಲ್ಲೆಯ ಕೂಡಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಆಡಿರುವ ಮಾತುಗಳು ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಹೇಳಿದ್ದೇನು?

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಆರಂಭದಲ್ಲಿ, ‘ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ’ ಎಂದು ಹೇಳಿದರು. ಇದಾದ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ ನೋಡಿ ಮಾತನ್ನು ತುಸು ಬದಲಿಸಿದರು. ‘ನಮ್ಮ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ’ ಎಂದರು.

ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಂದುವರಿಯಲಿದ್ದೇನೆ ಎಂದು ಸಿದ್ದರಾಮಯ್ಯ ನಂತರ ಡಿಕೆಶಿ ಮುಖ ನೋಡಿ ನಮ್ಮ ಸರ್ಕಾರ ಮುಂದುವರಿಯಲಿದೆ ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಸಂಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಬಗ್ಗೆ ಖುದ್ದು ಸಿದ್ದರಾಮಯ್ಯಗೇ ಅನುಮಾನವಿದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಹಿಂದೆ ಮೈಸೂರಿನಲ್ಲಿ ನೀಡಿದ್ದ, ”ಹೈಕಮಾಂಡ್ ನಿರ್ಧರಿಸಿದರೆ” ಎಂಬ ಹೇಳಿಕೆ ಚರ್ಚೆಗೀಡಾದ ರೀತಿಯಲ್ಲೇ ಕೂಡ್ಲಿಗಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆಯೂ ಗುಸುಗುಸು ಆರಂಭವಾಗಿದೆ.

ಕೂಡ್ಲಿಗಿಯ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯ ನೀರು ಹರಿಸಿ ಕೆರೆಗಳನ್ನು ತುಂಬಿಸುವ ಯೋಜನೆಗೆ ಸಿದ್ದರಾಮಯ್ಯ ಚಾಲನೆ ನೀಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಕೊನೆಗೂ ಇದೀಗ ಸಾಕಾರಗೊಂಡಿದೆ. ಇಷ್ಟೇ ಅಲ್ಲದೆ, ಕೋಟ್ಯಂತರ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಯೋಜನೆಗಳಿಗೆ ಚಾಲನೆ ಮುಖ್ಯಮಂತ್ರಿಗಳು.

ಇದನ್ನೂ ಓದಿ: ದೆಹಲಿಯಲ್ಲೇ ಶಕ್ತಿ ಪ್ರದರ್ಶನಕ್ಕೆ ಮುಂದಾದ ಸಿಎಂ ಬಣ: ಸಿದ್ದರಾಮಯ್ಯ ತಂತ್ರವೇನು?

ನಂತರ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಬಂದ ಬಳಿಕ ಎರಡು ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ನೇರವಾಗಿ ಜನರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಕಬ್ಬಿಗೆ ದರ ನಿಗದಿತ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *