ಬೆಂಗಳೂರು, ನವೆಂಬರ್ 10: ಬೆಂಗಳೂರಿನ ಬಸವೇಶ್ವರನನ್ನು ಬೈಕ್‌ಗೆ ಬೆಂಕಿ ಇಟ್ಟ ಘಟನೆ ನಡೆದಿದ್ದು, ಆರೋಪಿ ಯಶವಂತನನ್ನು ಬಸವೇಶ್ವರ ನಗರ ವಶಕ್ಕೆ ಪಡೆದಿದ್ದಾರೆ. ಬಂಧಿತನ ವಿಚಾರಣೆ ನಡೆಸಿದಾಗ ಸಾಲ ಸಿಗದ ಕಾರಣ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಿದ್ದಾನೆ.
ಯಶವಂತನಿಗೆ ಗಿಫ್ಟ್ ಆಗಿ ಸಿಕ್ಕಿದ ಬೈಕ್ ಅನ್ನು ಕೋಪದಿಂದ ತಾನೇ ಸುಟ್ಟುಹಾಕಿದ ಶಂಕೆ ವ್ಯಕ್ತವಾಗುತ್ತಿದೆ. ಈತ ನಡು ರಸ್ತೆಯಲ್ಲಿ ಬೈಕ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ. ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದರೂ, ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸವೇಶ್ವರನಗರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪರಾರಿಯಾಗಿರುವ ಆರೋಪಿ ಯಶವಂತಗಾಗಿ ಹುಡುಕಾಟ ಮುಂದುವರಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.