Headlines

ಜೈಲಲ್ಲಿ ಎಣ್ಣೆ ಪಾರ್ಟಿ ಕೇಸ್​ಗೆ ಸ್ಫೋಟಕ ಟ್ವಿಸ್ಟ್​: ಬಾಟಲಿಯಲ್ಲಿ ಇದ್ದಿದ್ದು ಮದ್ಯವಲ್ಲ, ಮೂತ್ರ?

ಜೈಲಲ್ಲಿ ಎಣ್ಣೆ ಪಾರ್ಟಿ ಕೇಸ್​ಗೆ ಸ್ಫೋಟಕ ಟ್ವಿಸ್ಟ್​: ಬಾಟಲಿಯಲ್ಲಿ ಇದ್ದಿದ್ದು ಮದ್ಯವಲ್ಲ, ಮೂತ್ರ?


ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್ ವಿಚಾರಕ್ಕೀಗ ಸ್ಪೋಟಕ ತಿರುವು ಸಿಕ್ಕಿದೆ. ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. 3 ಬಾಟಲಿಗಳನ್ನು ಸಾಲಾಗಿ ಜೋಡಿಸಿ ವಿಡಿಯೋ ಮಾಡಿದ್ದು, ಗ್ಲಾಸ್‌ಗೆ ಮೂತ್ರ ತುಂಬಿಸಿ ಮದ್ಯದ ರೀತಿಯಲ್ಲಿ ಅದನ್ನು ಬಿಂಬಿಸಲಾಗಿದೆ. ಬಳಿಕ ಆ ವಿಡಿಯೋವನ್ನ ಬೇಕಂತಲೇ ಹರಿಬಿಟ್ಟಿದ್ದಾರೆ ಎಂಬುದು ಗೊತ್ತಾಗಿದೆ.

ಷಡ್ಯಂತ್ರದ ಅನುಮಾನಕ್ಕೆ ಮತ್ತಷ್ಟು ಪುಷ್ಠಿ?

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಮೊಬೈಲ್ ಮತ್ತು ಟಿವಿಗಳ ಬಳಕೆಯ ವಿಡಿಯೋಗಳು ವೈರಲ್ ಆಗಿವೆ. ಜೈಲಿನಲ್ಲಿ ಭಯೋತ್ಪಾದಕರು ಮತ್ತು ಅತ್ಯಾಚಾರಿಗಳ ಕೈಯಲ್ಲಿ ಮೊಬೈಲ್ ಫೋನ್‌ಗಳೂ ಇವೆ. ಅಕ್ರಮಗಳ ಹಿಂದೆ ಅಧಿಕಾರಿಗಳು ಕೈವಾಡವಿದ್ದು, ಹುದ್ದೆಗಳಿಗಾಗಿ ಅಥವಾ ಹಣಕಾಸಿನ ಲಾಭಕ್ಕಾಗಿ ವ್ಯವಸ್ಥಿತ ಪಿತೂರಿ ನಡೆಯುತ್ತಿರುವುದು ಅನುಮಾನವಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಉನ್ನತ ಹುದ್ದೆಗಳಿಗೆ ಭಾರಿ ಬೇಡಿಕೆ ಇದೆ, ಇಲಿ ವಿಐಪಿ ಖೈದಿಗಳಿಗೆ ಸೌಲಭ್ಯ ನೀಡಿಯೇ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗುತ್ತೆ. ಹೀಗಾಗಿ ಹಿರಿಯ ಅಧಿಕಾರಿಗಳ ಟಾರ್ಗೆಟ್ ಮಾಡುವ ಉದ್ದೇಶದಿಂದ ಸಿಬ್ಬಂದಿಯೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಈ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದಾಗ ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಷಡ್ಯಂತ್ರದ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಎಫ್ಐಆರ್ ದಾಖಲು, ಎನ್ಐಎ ಎಂಟ್ರಿ

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರ ಸಂಬಂಧ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಿಸಿದರು, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಈಗಲೇ ಸಸ್ಪೆಂಡ್ ಮಾಡಲಾಗಿದೆ. ಜೊತೆಗೆ ಈ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಗೃಹ ಸಚಿವರು ಖಚಿತಪಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿರೋದಾಗಿ.

ವರದಿ: ವಿಕಾಸ್ ಟಿವಿ9, ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 6:04 pm, ಸೋಮ, 10 ನವೆಂಬರ್ 25



Source link

Leave a Reply

Your email address will not be published. Required fields are marked *