300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ನಟ ಧರ್ಮೇಂದ್ರ (ಧರ್ಮೇಂದ್ರ) ಅವರು ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ನವೆಂಬರ್ 11) ನಿಧನರಾದರು. 89 ವರ್ಷ ವಯಸ್ಸಿನ ಧರ್ಮೇಂದ್ರ ಅವರಿಗೆ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಚಿಕಿತ್ಸೆ ಫಲಿಸದೇ ಧರ್ಮೇಂದ್ರ ಅವರು ಮೃತರಾದರು.
ಇತ್ತೀಚೆಗಷ್ಟೇ ಧರ್ಮೇಂದ್ರ ಅವರು ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದರು. ಆ ಬಳಿಕ ಕೆಲವೇ ದಿನಗಳಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಸೋಮವಾರ (ನವೆಂಬರ್ 10) ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದು ತಿಳಿದುಕೊಂಡಿರುವ ಅಭಿಮಾನಿಗಳಿಗೆ ಆತಂಕವಾಗಿದೆ. ಧರ್ಮೇಂದ್ರ ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸಿದರು. ಆದರೆ ಪ್ರಾರ್ಥನೆ ಫಲಿಸಲಿಲ್ಲ.
ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಅವರು 6 ಕಾಲ ಸಕ್ರಿಯರಾಗಿದ್ದಾರೆ. ಇಳಿ ವಯಸ್ಸಿನಲ್ಲಿ ಅವರು ನಟಿಸುವುದನ್ನು ನಿಲ್ಲಿಸಲಿಲ್ಲ. ಇತ್ತೀಚಿನ ದಿನಗಳಲ್ಲಿ ಅವರು ಚಿಕ್ಕ-ಪುಟ್ಟ ಪಾತ್ರಗಳನ್ನು ಮಾಡಿದ್ದಾರೆ. ಅವರ ನಿಧನದಿಂದ ಕೋಟ್ಯಂತರ ಅಭಿಮಾನಿಗಳಿಗೆ ನೋವಾಗಿದೆ.
ಇದನ್ನೂ ಓದಿ: ಈ ನಟಿಯನ್ನು ಅತಿಯಾಗಿ ಪ್ರೀತಿಸಿದ್ದ ಧರ್ಮೇಂದ್ರ; ಬ್ರೇಕಪ್ ಆಗಿದ್ದೇಕೆ?
ಸಿನಿಮಾದಲ್ಲಿ ರಾಜಕೀಯ ಕ್ಷೇತ್ರದಲ್ಲೂ ಧರ್ಮೇಂದ್ರ ಅವರು ಯಶಸ್ಸು ಕಂಡಿದ್ದರು. 2004 ರಿಂದ 2009 ರ ತನಕ ಭಾರತೀಯ ಜನತಾ ಪಕ್ಷದಿಂದ ಅವರ ಸಂಸದನಾಗಿ ಕೆಲಸ ಮಾಡಿದರು. ಕಿರುತೆರೆ ಕಾರ್ಯಕ್ರಮಗಳ ಜಡ್ಜ್ ಆಗಿ ಕೂಡ ಅವರು ಕಾಣಿಸಿಕೊಂಡಿದ್ದರು. ಧರ್ಮೇಂದ್ರ ಅವರ ಅಗಲಿಕೆಗೆ ಸಿನಿಮಾ, ರಾಜಕೀಯ, ಕ್ರೀಡೆ ಮುಂತಾದ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.