ಬಾಲಿವುಡ್ನ (ಬಾಲಿವುಡ್) ದಿಗ್ಗಜ ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದರೆ ಕೆಲ ಮಾಧ್ಯಮಗಳು ಧರ್ಮೇಂದ್ರ ನಿಧನ ವರದಿ ಎಂದು ಕೆಲ ಸಮಯದ ಹಿಂದೆಯೇ ಪ್ರಸಾರ ಮಾಡಿದ್ದವು, ಇದನ್ನು ಗಮನಿಸಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಮಾನಿಗಳು ಶೋಕ ಸಂದೇಶ ಹಂಚಿಕೊಂಡರು. ಆದರೆ ಈ ವಿಷಯ ಧರ್ಮೇಂದ್ರ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ. ವಿಶೇಷವಾಗಿ ನಟಿ, ಸಂಸದೆ ಹೇಮಾಮಾಲಿನಿ ಅವರಂತೂ ಮಾಧ್ಯಮಗಳು, ಹಾಗೂ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಈ ರೀತಿ ನಡೆಯುತ್ತಿರುವುದು ಕ್ಷಮಿಸಲಾಗದು. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್‌ಗಳು ಸುಳ್ಳು ಸುದ್ದಿಗಳನ್ನು ಹರಡಬಹುದೇ? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಯ ಅಗತ್ಯಕ್ಕೆ ಸರಿಯಾದ ಗೌರವವನ್ನು ನೀಡಿ’ ಎಂದು ಹೇಮಾ ಮಾಲಿನಿ ಆಕ್ರೋಶದಿಂದ ಟ್ವೀಟ್ ಮಾಡಿದ್ದಾರೆ.
ನಡೆಯುತ್ತಿರುವುದು ಅಕ್ಷಮ್ಯ! ಚಿಕಿತ್ಸೆಗೆ ಸ್ಪಂದಿಸಿ ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ವಾಹಿನಿಗಳು ಸುಳ್ಳು ಸುದ್ದಿ ಹಬ್ಬಿಸುವುದು ಹೇಗೆ? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿಯುತವಾಗಿದೆ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಯ ಅಗತ್ಯಕ್ಕೆ ಸರಿಯಾದ ಗೌರವವನ್ನು ನೀಡಿ.
— ಹೇಮಾ ಮಾಲಿನಿ (@dreamgirlhema) ನವೆಂಬರ್ 11, 2025
ಬಾಲಿವುಡ್ನ ಕೆಲವು ಮಂದಿ ಸಹ ಧರ್ಮೇಂದ್ರ ಅವರ ಅಗಲಿಕೆ ಬಗ್ಗೆ ಟ್ವೀಟ್ ಮಾಡಿದ್ದರು. ಜಾವೇದ್ ಅಖ್ತರ್ ಸೇರಿದಂತೆ ಇನ್ನೂ ಕೆಲವು ಧರ್ಮೇಂದ್ರ ಅಗಲಿಕೆಗೆ ಸಂತಾಪ ಸಂದೇಶಗಳನ್ನು ಟ್ವಿಟರ್‌ನಲ್ಲಿ ಪ್ರಕಟಿಸಲಾಗಿದೆ. ಆದರೆ ಧರ್ಮೇಂದ್ರ ಇನ್ನೂ ಕಾಲವಾಗಿಲ್ಲ. ಹೇಮಾಮಾಲಿನಿ ಮಾಡಿರುವ ಟ್ವೀಟ್‌ನ ಅನ್ವಯ ಅವರನ್ನೂ ಬದುಕಿದ್ದಾರೆ. ಚಿಕಿತ್ಸೆಯಲ್ಲಿ ಭಾಗವಹಿಸುತ್ತಿದ್ದಾರೆ.
ಇದನ್ನೂ ಓದಿ:ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಮಗ ಸನ್ನಿ ಡಿಯೋಲ್
ಧರ್ಮೇಂದ್ರ ಅವರು ಮುಂಬೈನ ಪ್ರತಿಷ್ಠಿತ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ಇಶಾ ಡಿಯೋಲ್, ಅಹಾನಾ ಡಿಯೋಲ್ ಅವರನ್ನು ಆಸ್ಪತ್ರೆಗೆ ಭೇಟಿ ಮಾಡಲಾಗಿದೆ. ಪತ್ನಿ, ನಟಿ ಹೇಮಾಲಿನಿ ಸಹ ಆಸ್ಪತ್ರೆಗೆ ಆಗಮಿಸಿದ್ದಾರೆ. ನಟಿ ಇಶಾ ಡಿಯೋಲ್ ಸಹ ಸಾಮಾಜಿಕ ಜಾಲತಾಣಗಳಲ್ಲಿ ತಂದೆಯ ಆರೋಗ್ಯದ ಬಗ್ಗೆ ಬರೆದುಕೊಂಡಿದ್ದು, ನನ್ನ ತಂದೆ ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು, ನಿನ್ನೆಯಷ್ಟೆ ಅವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ