ಮಾಲೂರು ಕ್ಷೇತ್ರದ ಮರುಮತ ಎಣಿಕೆ ಕಾರ್ಯ ಅಂತ್ಯ: ಕುತೂಹಲ ಮೂಡಿಸಿದ ಫಲಿತಾಂಶ

ಮಾಲೂರು ಕ್ಷೇತ್ರದ ಮರುಮತ ಎಣಿಕೆ ಕಾರ್ಯ ಅಂತ್ಯ: ಕುತೂಹಲ ಮೂಡಿಸಿದ ಫಲಿತಾಂಶ


ಕೋಲಾರ, (ನವೆಂಬರ್ 11): ಕಾಂಗ್ರೆಸ್ ನ ಕೆ.ವೈ. ನಂಜೇಗೌಡ ಮತ್ತು ಬಿಜೆಪಿಯ ಕೆ.ಎಸ್. ಮಂಜುನಾಥ್‌ ಗೌಡ ನಡವಿನ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಪತ್ರಿಕಾ ಆದೇಶದಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಇಂದು (ನವೆಂಬರ್ 11) ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆದಿದ್ದು, ಮರು ಎಣಿಕೆಯ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಿದೆ. ತದನಂತರ ನ್ಯಾಯಾಲಯ ಈ ಕುರಿತು ತನ್ನ ತೀರ್ಪು ಪ್ರಕಟಿಸಲಿದೆ. ಮೂಲಗಳ ಪ್ರಕಾರ ಮರು ಮತ ಎಣಿಕೆಯಲ್ಲೂ ಸಹ ಫಲಿತಾಂಶ ಯಥಾಸ್ಥಿತಿ ಸಾಧ್ಯತೆ ಇದೆ. ಆದರೂ ಮರುಮತ ಎಣಿಕೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.

2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೈ.ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಆದರೆ, ಮತ ಎಣಿಕೆಯಲ್ಲಿ ಲೋಪವಾಗಿದೆ, ಈ ಸಂಬಂಧ ನಂಜೇಗೌಡ ಅವರಿಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರು ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅಧಿಕೃತ ಆದೇಶದಂತೆ ಮರುಮತ ಎಣಿಕೆ ಮಾಡಲಾಗುವುದು, ಫಲಿತಾಂಶದ ಫಲಿತಾಂಶ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಪರವಾಗಿ ಬರುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ನಂಜೇಗೌಡಗೆ ತುಸು ರಿಲೀಫ್: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ

ಅಭ್ಯರ್ಥಿಗಳ ಅನುಮಾನ, ಗೊಂದಲ ನಿವಾರಣೆ

ಪ್ರಮುಖ ಮೂರು ಅಭ್ಯರ್ಥಿಗಳ ಎದುರಲ್ಲೇ ಮತ ಎಣಿಕೆ ಕಾರ್ಯ ನಡೆದಿದ್ದು, ಪೋಸ್ಟಲ್ ಬ್ಯಾಲೆಟ್ ನಲ್ಲಿ ಹಾಗೂ ವ್ಯಾಲಿಡ್ ಮತಗಳಲ್ಲಿ ಸಣ್ಣ ಪುಟ್ಟ ಬದಲಾವಣೆಯಾಗಿದೆ. ಸುತ್ತಿನಲ್ಲೂ ಅಧಿಕಾರಿಗಳು ಅಭ್ಯರ್ಥಿಗಳ ಅನುಮಾನ, ಗೊಂದಲ ನಿವಾರಣೆ ಮಾಡಿ ಎಣಿಕೆ ಕಾರ್ಯ ಮಾಡಿದ್ದಾರೆ. ಇನ್ನು ಚುನಾವಣಾಧಿಕಾರಿಗಳು ಸಹ ಪ್ರತಿ ಸುತ್ತಿನ ಮತ ಎಣಿಕೆ ನಂತರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.

ಫಲಿತಾಂಶ ಬದಲಾವಣೆ ಕಡಿಮೆ ಎಂದ ಪಕ್ಷೇತರ ಅಭ್ಯರ್ಥಿ

ಇನ್ನು ಮರು ಮತ ಎಣಿಕೆ ಬಗ್ಗೆ ಮೂರನೇ ಸಮೀಪ ಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯಕುಮಾರ್ ಪ್ರತಿಕ್ರಿಯಿಸಿದ್ದು, ತುಂಬಾ ಚೆನ್ನಾಗಿ ಮರು ಮತ ಎಣಿಕೆ ಕಾರ್ಯ ನಡೆದಿದೆ. ಅಧಿಕಾರಿಗಳು ತುಂಬಾ ಚೆನ್ನಾಗಿ ಮರು ಮತ ಎಣಿಕೆ ಕಾರ್ಯ ನಡೆಸಿಕೊಟ್ಟಿದ್ದಾರೆ. ಏನೆಲ್ಲಾ ದೂರು ಬಂದಿತ್ತು ಆ ಪ್ರಕಾರ ಮತ ಎಣಿಕೆ ನಡೆದಿದೆ. ಮರು ಮತ ಎಣಿಕೆ ಕಾರ್ಯ ಸಂಪೂರ್ಣವಾಗಿ ಮುಗಿದಿದೆ, ಮರು ಮತ ಎಣಿಕೆ ನನಗೆ ತೃಪ್ತಿ ತಂದಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಯಾವುದೇ ಫಲಿತಾಂಶವನ್ನು ಹೇಳಲಾಗಿದೆ. ಸಣ್ಣಪುಟ್ಟ ಗೊಂದಲವಿತ್ತು, ಅದನ್ನು ನಿವಾರಣೆ ಮಾಡಿದೆ. ನಾನು ಕೋರ್ಟ್ ಹೋಗಿಲ್ಲ. ಆದರೆ, ಚುನಾವಣಾಧಿಕಾರಿಗಳು ನೋಟೀಸ್ ನೀಡಿದ್ದ ಹಿನ್ನಲೆಯಲ್ಲಿ ನಾನು ಬಂದಿದ್ದೀನಿ. ಫಲಿತಾಂಶದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ ಎಂದು ಪರೋಕ್ಷವಾಗಿ ನಂಜೇಗೌಡ ಅವರೇ ಗೆಲ್ಲಲಿದ್ದಾರೆ ಎಂದು ಹೇಳಿದರು.

ಮರು ಎಣಿಕೆ ಸಮಾಧಾನವಾಗಿಲ್ಲ ಎಂದ ಮಂಜುನಾಥ್

ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ನಂತರ ಮಾಜಿ ಶಾಸಕ ಮಂಜುನಾಥಗೌಡ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ನನಗೆ ಇನ್ನೂ ಸಮಾಧಾನ ಆಗಿಲ್ಲ. ಈ ಪ್ರಶ್ನೆಗಳಿಗೆ ನನಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳು ಪ್ರೊಸಿಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್ ಗಳನ್ನು ಎಣಿಸಬೇಕಿತ್ತು. ಆದರೆ ಕೇವಲ ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಿದೆ. ಚುನಾವಣೆ ಮರುಎಣಿಕೆ ವಿರುದ್ಧ ನನ್ನ ಕಾನೂನು ಹೋರಾಟ ಮುಂದುವರಿಯಲಿದೆ. ಸುಪ್ರೀಂ ಕೋರ್ಟ್ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಎಂದು ಹೇಳಿದೆ. ಆದರೆ ನನ್ನ ಮನವಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ. ನನ್ನ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದರು.

ದೇಶದಲ್ಲಿ ಇದೇ ಮೊದಲ ಬಾರಿಗೆ ಇವಿಎಂ ಮತಗಳ ಮರುಎಣಿಕೆ ನಡೆದಿದೆ. ಹೀಗಾಗಿ ಫಲಿತಾಂಶ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿಗಷ್ಟೇ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಚುನಾವಣಾ ಅಕ್ರಮದ ಬಗ್ಗೆ ಟೀಕಿಸಿ ಮತಗಳು ಕೇಳಿಬರುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈಗ ಸಮೀಪ ಸ್ಪರ್ಧಿ ಬಿಜೆಪಿಯ ಮಂಜುನಾಥ್ ಗೆದ್ದರೆ ಇದರ ಪರಿಣಾಮ ರಾಜ್ಯ ಕಾಂಗ್ರೆಸ್ ಮೇಲೆ ಬೀರಲಿದೆ, ರಾಹುಲ್ ಗಾಂಧಿ ಆರೋಪಕ್ಕೂ ಹಿನ್ನಡೆಯಾಗಲಿದೆ.

ಇನ್ನು 2023ರಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ನ ನಂಜೇಗೌಡ, ಈ ಬಾರಿ ಮರು ಮತ ಎಣಿಕೆಯಲ್ಲೂ ಗೆದ್ದರೆ ಯಥಾಸ್ಥಿತಿಯಂತೆಯೇ ಅವರೇ ಶಾಸಕರಾಗಿ ಮುಂದುವರಿಯಲಿದ್ದಾರೆ.



Source link

Leave a Reply

Your email address will not be published. Required fields are marked *