ಸ್ಕ್ಯಾನಿಂಗ್​​ಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆನೇಕಲ್​ನಲ್ಲೊಬ್ಬ ಕಾಮುಕ ರೇಡಿಯಾಲಜಿಸ್ಟ್

ಸ್ಕ್ಯಾನಿಂಗ್​​ಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆನೇಕಲ್​ನಲ್ಲೊಬ್ಬ ಕಾಮುಕ ರೇಡಿಯಾಲಜಿಸ್ಟ್


ಬೆಂಗಳೂರು, ನವೆಂಬರ್ 12: ಸ್ಕ್ಯಾನಿಂಗ್ ಸೆಂಟರ್‌ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ವಿರುದ್ಧ ದೌರ್ಜನ್ಯ ನಡೆಸುತ್ತಿರುವ ಆರೋಪ ಆನೇಕಲ್ ಪಟ್ಟಣದಲ್ಲಿ ಕೇಳಿಬಂದಿದೆ. ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೇಡಿಯಾಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಆರೋಪ ಕೇಳಿಬಂದಿದ್ದು, ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿರುವ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊಟ್ಟೆ ನೋವಿನ ಕಾರಣ ಪತಿಯೊಂದಿಗೆ ಮಹಿಳೆ ಸ್ಕ್ಯಾನಿಂಗ್ ಸೆಂಟರ್‌ಗೆ ಹೋಗಿದ್ದಳು. ಈ ವೇಳೆ ಸ್ಕ್ಯಾನಿಂಗ್ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಮಹಿಳೆ ಖಾಸಗಿ ಅಂಗಗಳಿಗೆ ಕೈ ಹಾಕಿದ್ದಾನೆ. ಮಹಿಳೆ ವಿರೋಧಿಸಿದಾಗ ಬೆದರಿಕೆ ಹಾಕಿರುವ ಆರೋಪಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ. ಘಟನೆಯ ದೃಶ್ಯವನ್ನು ಸಂತ್ರಸ್ತ ಮಹಿಳೆ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾಳೆ. ಆದರೆ, ಆರೋಪಿ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ ಬಿಟ್ಟುಕೊಟ್ಟಿದ್ದಾರೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು

ಡೇಟಿಂಗ್ ಆಯಪ್ನಲ್ಲಿ ಪರಿಚಯವಾಯಿತು ಯುವತಿಯಿಂದ ಪಂಗನಾಮ

ಡೇಟಿಂಗ್ ಆಯಪ್ ನಲ್ಲಿ ಪರಿಚಯವಾದ ಯುವತಿ ನಂಬಿ ಯುವಕನೋರ್ವ ಹಣ, ಬಂಗಾರ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 2 ತಿಂಗಳ ಹಿಂದೆ ಡೇಟಿಂಗ್ ಆಯಪ್‌ನಲ್ಲಿ ಕವಿಪ್ರಿಯಾ ಎಂಬ ಹೆಸರಿನ ಯುವತಿಯನ್ನ ನವೆಂಬರ್ 1 ರಂದು ಇಂದಿರಾನಗರದ ರೆಸ್ಟೋರೆಂಟ್‌ನಲ್ಲಿ ಯುವಕರನ್ನು ಭೇಟಿ ಮಾಡಲಾಗಿತ್ತು. ಬಳಿಕ ಇಬ್ಬರೂ ಮದ್ಯಪಾನ ಮಾಡಿದ್ದು, ಪಾಟರ್ ಬಳಿಕ ಯುವಕನನ್ನ ಕವಿಪ್ರಿಯಾ ಒಬ್ಬ ಲಾಡ್ಜ್ ಗೆ ಕರೆದೊಯ್ದಿದ್ದಳು.ಮಧ್ಯರಾತ್ರಿ ಆಕೆಯೇ ಊಟಕ್ಕೆ ಆರ್ಡರ್ ಮಾಡಿ ತರಿಸಿಕೊಂಡಿದ್ದಳು. ನಂತರ ಕವಿಪ್ರಿಯಾ ಕೊಟ್ಟ ನೀರು ಕುಡಿದ ಯುವಕ ತಪ್ಪಿದ್ದ ಎನ್ನಲಾದ, ಬೆಳಿಗ್ಗೆ ಎದ್ದು ನೋಡಿದಾಗ ಯುವಕನ ಮೈಮೇಲಿದ್ದ ಚಿನ್ನದ ಸರ, ಚಿನ್ನದ ಕೈಬಳೆ ಮತ್ತು 10 ಸಾವಿರ ನಗದು ಕಳವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಇಂದಿರಾನಗರ ಠಾಣೆಗೆ ಯುವಕ ದೂರು ನೀಡಿದ್ದು, ಆರೋಪಿ ಯುವತಿಗಾಗಿ ಪೊಲೀಸರು ಪತ್ತೆ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 12:15 pm, ಬುಧವಾರ, 12 ನವೆಂಬರ್ 25



Source link

Leave a Reply

Your email address will not be published. Required fields are marked *