ಧರ್ಮಸ್ಥಳ ತಲೆಬುರುಡೆ ಕೇಸ್​: ತಿಮರೋಡಿ ಮತ್ತು ತಂಡಕ್ಕೆ ಶಾಕ್​ ಕೊಟ್ಟ ಹೈಕೋರ್ಟ್​

ಧರ್ಮಸ್ಥಳ ತಲೆಬುರುಡೆ ಕೇಸ್​: ತಿಮರೋಡಿ ಮತ್ತು ತಂಡಕ್ಕೆ ಶಾಕ್​ ಕೊಟ್ಟ ಹೈಕೋರ್ಟ್​


ಬೆಂಗಳೂರು, ನವೆಂಬರ್ 12: ಧರ್ಮಸ್ಥಳ ತಲೆಬುರುಡೆ ಕೇಸ್ (ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ)ಕರ್ನಾಟಕ ತನಿಖೆ ವಿಚಾರವಾಗಿ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್‌ಐಆರ್ 39/2025 ತನಿಖೆಗೆ ಅ.30 ರಂದು ನೀಡಿದ್ದ ತಡೆಯಾಜ್ಞೆಯನ್ನು ಸೂಚಿಸಿದ್ದು, ತನಿಖೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠ್ಠಲಗೌಡ ಎಸ್ ಐಟಿ ತನಿಖೆಯನ್ನು ಮತ್ತೆ ಎದುರಿಸಬೇಕಾಗಿದೆ.

ಪ್ರಕರಣ ಸಂಬಂಧ ಎಸ್‌ಐಟಿ ಪರ ವಾದಿಸಿರುವ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆಂದು ನ್ಯಾಯಾಲಕ್ಕೆ ತಿಳಿಸಿದ್ದರು. ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ವಿಸ್ತರಣೆ ಮಾಡಿ ನ್ಯಾ.ಮೊಹಮ್ಮದ್ ನವಾಜ್ ಅವರ ಆದೇಶ ಪೀಠದಿಂದ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್, ಚಿನ್ನಯ್ಯ ಹಿಂದಿದ್ದ ಟೀನ್ನ ಮತ್ತೊಂದು ಕಳ್ಳಾಟ ಬಯಲು

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ 39/2025 ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠ್ಠಲಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಬಾಲನ್, ಈಗಾಲೇ 9 ಬಾರಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಎಫ್‌ಐಆರ್‌ನಲ್ಲಿ ನಮ್ಮನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್‌ಯಾಪ್, ಇಮೇಲ್‌ಗಳಲ್ಲಿ ಮಾಹಿತಿ. BNSS ಸೆಕ್ಷನ್ 35(3) ಅಡಿಯಲ್ಲಿ ಸಮನ್ಸ್ ನೀಡಿದ್ದು, ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನು ಬಾಹಿರ. ನಾವು ಆರೋಪಿಗಳೂ ಅಲ್ಲ, ಸಾಕ್ಷಿಯೂ ಅಲ್ಲವೆಂದು ವಾದ ಮಂಡಿಸಿದ್ದರು. ರಾಜಕೀಯ , ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದ ನೋಟಿಸ್ ನೀಡಲಾಗುತ್ತದೆ. ವಿಚಾರಣೆಯ ಹೆಸರಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿಯವರೆಗೆ ಕೂರಿಸಲಾಗುತ್ತೆ. 150 ಗಂಟೆಗೂ ಹೆಚ್ಚು ಕಾಲ ಅಜರ್ಜದಾರರ ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ 211(a) ಅಡಿ ಎಫ್‌ಐಆರ್ ದಾಖಲಿಸಿ ನಂತರ ಬೇರೆ ಸೆಕ್ಷನ್ ಸೇರಿಸಿದ್ದಾರೆ ಎಂದು ಹೇಳಿದ್ದಾರೆ.

ಎಸ್‌ಐಟಿ ಪರ ಎಸ್‌ಪಿಪಿ ಬಿ.ಎನ್. ಜಗದೀಶ್ ವಾದ ಮಂಡಿಸಿದ್ದು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾನೆ. ಧರ್ಮಸ್ಥಳ ಗ್ರಾಮದ 20 ಕಡೆ ಅಗೆದು ಪರಿಶೀಲನೆ ನಡೆಸಲಾಗಿದೆ, ಈಗ ಆರೋಪಿಯಾಗಿ ಅವರಿಗೆ ನೋಟಿಸ್ ನೀಡಿದ್ದಾರೆ. 35(3) ಅಡಿ ನೋಟಿಸ್ ಜಾರಿಗೊಳಿಸಿದ ಬಳಿಕ ಅರ್ಜಿದಾರರು ಬಂದಿಲ್ಲ. ಈಗ ಹೊಸದಾಗಿ 35(3) ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದರು. ಪರ-ವಿರೋಧ ವಾದ ಆಲಿಸಿದ್ದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 2:09 pm, ಬುಧವಾರ, 12 ನವೆಂಬರ್ 25



Source link

Leave a Reply

Your email address will not be published. Required fields are marked *