ಬೆಂಗಳೂರು, ನವೆಂಬರ್ 13: ಕೋವಿಡ್ ಬಳಿಕ ರಾಜಧಾನಿ ಬೆಂಗಳೂರು (ಬೆಂಗಳೂರು) ಸೇರಿದಂತೆ ಕರ್ನಾಟಕದಲ್ಲಿ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದ್ದು ಜನರ ಜೀವ ತಗೆಯುತ್ತಿದೆ. ಅದರಲ್ಲೂ ಕೋಮಾರ್ಬಿಟಿಸ್ ಸಾಂಕ್ರಾಮಿಕ ಖಾಯಿಲೆಗಳಿಂದ ಪರದಾಡಿದೆ. ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯ ಸಮಸ್ಯೆಗಳು ವ್ಯಾಪಕ ಹಿನ್ನಲೆಯಲ್ಲಿ ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಪಟ್ಟಿಯನ್ನು ಹೊಂದಿದ್ದು, ಇವರಿಗೆ ಮನೆ ಬಾಗಿಲಿಗೆ ಚಿಕಿತ್ಸೆ ಮತ್ತು ಚಿಕಿತ್ಸೆ ನೀಡುವ ‘ಗೃಹ ಆರೋಗ್ಯ’ ಯೋಜನೆ (ಗೃಹ ಆರೋಗ್ಯ ಯೋಜನೆ) ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿಐ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಿಗಳನ್ನು ನೀಡಲಾಗುತ್ತಿದೆ. ಕಳೆದ ಎರಡು ತಿಂಗಳಿನಲ್ಲಿ ‘ಗೃಹ ಆರೋಗ್ಯದಡಿ’ ಜನರಿಗೆ ಆರೋಗ್ಯ ಇಲಾಖೆ ಕ್ಯಾನ್ಸರ್ ಸ್ಕ್ರಿನಿಂಗ್ ಮಾಡಿದೆ. ಈ ವೇಳೆ 5664 ಕ್ಯಾನ್ಸರ್ (ಕ್ಯಾನ್ಸರ್) ಪೀಡಿತರಾಗಿದ್ದಾರೆ.
ಕಳೆದ ಎರಡು ತಿಂಗಳ ‘ಗೃಹ ಆರೋಗ್ಯ’ದಲ್ಲಿ 5664 ಕ್ಯಾನ್ಸರ್ ಪೀಡಿತ ರೋಗಿಗಳಿದ್ದು ಹೆಚ್ಚುವರಿ ಚಿಕಿತ್ಸೆಗೆ ಇಲಾಖೆ ಸೂಚಿಸಿದೆ. ಈ ಬಾಹ್ಯ ಓರಲ್ ಕ್ಯಾನ್ಸರ್ 3403 ಜನರಲ್ಲಿ ಕಂಡು ಬಂದಿದೆ. ಆರೋಗ್ಯ ಇಲಾಖೆ ಇದೀಗ ಮತ್ತಷ್ಟು ಜನರನ್ನ ಸ್ಕ್ರೀನಿಂಗ್ಗೆ ಒಳಪಡಿಸಲು ಮುಂದಾಗಿದೆ.
ಗೃಹ ಆರೋಗ್ಯ ತಪಾಸಣೆ ವೇಳೆ ಬೆಳಕಿಗೆ ಬಂದ ಕ್ಯಾನ್ಸರ್ ಪ್ರಕರಣಗಳು
ಓರಲ್ ಕ್ಯಾನ್ಸರ್
- ಸ್ಕ್ರಿನಿಂಗ್ – 11,92,436
- ಕ್ಯಾನ್ಸರ್ ಪತ್ತೆ – 3403
ಬ್ರೆಸ್ಟ್ ಕ್ಯಾನ್ಸರ್
- ಸ್ಕ್ರಿನಿಂಗ್- 5,38,688
- ಕ್ಯಾನ್ಸರ್ ಪತ್ತೆ- 1311
ಸರ್ವೈಕಲ್ ಕ್ಯಾನ್ಸರ್
- ಸ್ಕ್ರಿನಿಂಗ್- 3,85,714
- ಕ್ಯಾನ್ಸರ್ ಪತ್ತೆ- 950
ಮಹಿಳೆಯರಲ್ಲೇ ಹೆಚ್ಚು ಕ್ಯಾನ್ಸರ್
ಪ್ರತಿ ವರ್ಷ ಭಾರತದಲ್ಲಿ 13.9 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ, ಕರ್ನಾಟಕದಲ್ಲಿ ಕಳೆದ ವರ್ಷ 87 ಸಾವಿರ ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಪ್ರಮುಖವಾಗಿ ಮಹಿಳೆಯರೇ ಹೆಚ್ಚಾಗಿ ಮಾರಕ ಕ್ಯಾನ್ಸರ್‌ಗೆ ತುತ್ತಾಗುತ್ತಿದೆ. ಕಳೆದ ವರ್ಷ ಬರೋಬ್ಬರಿ 48685 ಮಹಿಳೆಯರಲ್ಲಿ ಹಾಗೂ 39170 ಪುರುಷರಲ್ಲಿ ಕ್ಯಾನ್ಸರ್ ಇದೆ.
ಬೆಂಗಳೂರಿನಲ್ಲೇ ಹೆಚ್ಚು ಕ್ಯಾನ್ಸರ್ ಪ್ರಕರಣ
ಬೆಚ್ಚಿಬೀಳಿಸುವ ಸಂಗತಿ ಎಂದರೆ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಒಟ್ಟಿನಲ್ಲಿ ಬದಲಾದ ಜೀವನಶೈಲಿ, ಮಾಲಿನ್ಯ ಇತರ ಕಾರಣಗಳಿಂದ ಕ್ಯಾನ್ಸರ್ ವ್ಯಾಪಕವಾಗಿ ಹರಡುತ್ತಿದೆ, ಜನರ ಆರೋಗ್ಯದ ಬಗ್ಗೆ ಕೊಂಚ ಹೆಚ್ಚು ಎಚ್ಚರವಹಿಸಬೇಕಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ