ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ (ನ.14) ಶುರುವಾಗಿದೆ. ಈ ಸರಣಿಗೆ ಆಯ್ಕೆಯಾದ ಟೀಂ ಇಂಡಿಯಾದ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಮೊದಲ ಪಂದ್ಯಕ್ಕೂ ಮುನ್ನ ತಂಡದಿಂದ ಕೈ ಬಿಡಲಾಗಿದೆ.
ಕೋಲ್ಕತ್ತಾದ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಮ್ಯಾಚ್ಗೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ಅವರ ತಂಡದಿಂದ ಕೈ ಬಿಟ್ಟಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲ್ಲವೆನ್ ನಿಂದ ಹೊರಗಿಟ್ಟಿರುವುದು.
ಮೊದಲ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್ ನಲ್ಲಿ ಧ್ರುವ್ ಜುರೆಲ್ ಸ್ಥಾನ ಪಡೆಯಲಿದ್ದಾರೆ. ಸೌತ್ ಆಫ್ರಿಕಾ ‘ಎ’ ವಿರುದ್ಧದ ಪಂದ್ಯಗಳಲ್ಲಿ ಜುರೆಲ್ ಎರಡು ಅಜೇಯ ಶತಕಗಳನ್ನು ಬಾರಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ಅಷ್ಟೇ ಅಲ್ಲದೆ ಈಡನ್ ಗಾರ್ಡನ್ಸ್ ಮೈದಾನವು ಸ್ಪಿನ್ ಫ್ರೆಂಡ್ ಪಿಚ್ ಹೊಂದಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಅದರಂತೆ ಆಲ್ ರೌಂಡರ್ ಆಗಿ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.
ಇತ್ತ ಮೂವರು ಸ್ಪಿನ್ ಆಲ್ ರೌಂಡರ್ ಗಳನ್ನು ಕಣಕ್ಕಿಳಿಸಿದರೆ ನಿತೀಶ್ ಕುಮಾರ್ ರೆಡ್ಡಿ ಬೆಂಚ್ ಕಾಯ. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿತ್ತು, ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಣ ಏಕದಿನ ಆಟಗಾರನನ್ನು ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಮೂಲಕ ಫಿಟ್ನೆಸ್ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ದೀಪ್ ಸಿರಾಜ್, ಆಕಾಶ, ಕುಲ್ದೀಪ್ ಸಿರಾಜ್.





