ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ
ಬಾಗಲಕೋಟೆ, ನವೆಂಬರ್ 13: ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.