ಬೆಳಗಾವಿ, ನವೆಂಬರ್ 14: ಸುರ್ವಣ ಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನಲೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು, ಅಧಿವೇಶನಕ್ಕೆ ಅಗತ್ಯ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಭದ್ರತೆಗಾಗಿ 6 ಸಾವಿರ
ಡಿಸಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಎಸ್ಪಿ ಭೀಮಾಶಂಕರ್ ಗುಳೇದ್ ಸೇರಿದಂತೆ ಇತರ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ಊಟದ ಸಮಿತಿ, ವಸತಿ, ಬಂದೋಬಸ್ತ್ ಸಮಿತಿ, ದೂರುಗಳ ಸ್ವೀಕಾರ ಸಮಿತಿ ಸೇರಿದಂತೆ ಆರು ಸಮಿತಿಗಳಿಗೆ ಈ ರಚನೆ ಮಾಡಿ ಅದರ ನೇತೃತ್ವವನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡಲಾಗುತ್ತದೆ. ನಮ್ಮ ಖಾಸಗಿ ಹೋಟೆಲ್‌ಗಳ ನಿಯಂತ್ರಣಕ್ಕೆ ಪೂರ್ವಭಾವಿಯಾಗಿ ಕಾರ್ಯನಿರ್ವಹಿಸುತ್ತಿದೆ, ಅಧಿವೇಶನದ ಸಮಯದಲ್ಲಿ ನೆಟ್ವರ್ಕ್ ಸಮಸ್ಯೆ ಆಗಬಾರದು ಎಂಬ ವಿವಿಧ ಸಹ ವ್ಯವಸ್ಥೆ ಮಾಡಲಾಗುತ್ತಿದೆ. ಅಧಿವೇಶನದ ವೇಳೆ ಬಂದೋಬಸ್ತ್ ಗಾಗಿ ಈ ಬಾರಿ 6 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದ್ದು, ಪ್ರತಿಭಟನೆ ನಡೆಸುವವರಿಗೆ ಪೊಲೀಸ್ ಕಮಿಷನರ್ ಅನುಮತಿ ನೀಡಬೇಕು. ಕಳೆದ ಬಾರಿಯಂತೆ ಈ ಬಾರಿ ಗದ್ದಲ-ಗಲಾಟೆ ಆಗದಂತೆ ಮುಂಜಾಗ್ರತೆ ಕ್ರಮಕ್ಕೆ ಮುಂದಾಗಿದೆ.
ಇದನ್ನೂ ಓದಿ: ಬೆಳಗಾವಿ ಅಧಿವೇಶನ ಮೋಜು-ಮಸ್ತಿಗೆ ನಡೆಯುತ್ತಾ? ಏನಂದ್ರು ಖಾದರ್?
ಧಗಧಗಿಸುತ್ತಾ ರೈತರ ರೋಷಾಗ್ನಿ?
ಮತ್ತೊಂದೆಡೆ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರ ಕಿಚ್ಚು ಧಗಧಗಿಸುತ್ತಿದ್ದು, ಸರ್ಕಾರದ ಪ್ರವೇಶದ ಬಳಿಕವೂ ಹೋರಾಟ ನಿಂತಿಲ್ಲ. ಈ ಬೆಳವಣಿಗೆಯ ನಡುವೆಯೇ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ತಯಾರಿ ಶುರುವಾಗಿದೆ. ಕುಂದಾನಗರಿಯಲ್ಲಿ ನಡೆಯುವ ಅಧಿವೇಶನ ಬರಿ ಹೋರಾಟಗಳಿಗೆ ಸೀಮಿತವಾಗಿರುವ ನಡುವೆ, ರೈತರು ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಕ್ಕರೆ ಕಾರ್ಖಾನೆಗಳ ಮಾಲಕರ ಮನವೊಲಿಸಿರುವ ಸರ್ಕಾರ, ಟನ್ ಕಬ್ಬಿಗೆ 3300 ರೂ. ನಿಗದಿಪಡಿಸಿತ್ತು. ಆದರೆ ಈ ನಿರ್ಧಾರವನ್ನ ಕೆಲ ರೈತರು ಮಾತ್ರ ಸ್ವಾಗತಿಸಿದ್ದು, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆ ಮುಂದುವರಿದಿದೆ. ಹೀಗಾಗಿ ಸರ್ಕಾರಕ್ಕೆ ದೊಡ್ಡ ಮಟ್ಟದ ಶಾಕ್ ಕೊಡಲು ರೈತರಿಗೆ ಸಿದ್ಧತೆಂಬ ಸುದ್ದಿ ಹರಿದಾಡುತ್ತಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.