ಬೆಂಗಳೂರು, ನವೆಂಬರ್ 15: ಬಿಹಾರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಇದುವರೆಗೆ ರಾಹುಲ್ ಗಾಂಧಿ 95 ಚುನಾವಣೆಗಳಿಗೆ ಸೋತಿದ್ದಾರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಹುಲ್ ಗಾಂಧಿಯದು ಐರನ್ ಲೆಗ್ ಅನ್ನೋದು ಸಾಬೀತಾಗಿದೆ. ಅವರು ಕಾಲಿಡ್ತಾರೆಯೋ ಅಲ್ಲಿ ಅವರ ಪಕ್ಷ ಉದ್ಧಾರ ಆಗಲ್ಲ. ಇದಕ್ಕೆ ನಿನ್ನೆ ಬಂದ ಬಿಹಾರದ ಫಲಿತಾಂಶವೇ ಸ್ಪಷ್ಟ ಉದಾಹರಣೆಯಾಗಿದೆ. ಇಲ್ಲ, ರಾಹುಲ್ ಗಾಂಧಿ ದೇಶದಿಂದ ಮಾಯವಾಗಿದ್ದಾರೆ. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವುದನ್ನು ನೋಡಿ ಅವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೇ ದೇಶದ ಹೊರಗೆ ಭಾರತ ವಿರೋಧಿ,’ ಬಿಜೆಪಿ ವಿರೋಧಿ ಹೇಳಿಕೆ ಕೊಡುತ್ತಾರೆ ಎಂದು ಟೀಕಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ