ನವದೆಹಲಿ, ನವೆಂಬರ್ 15: ಮುಖ್ಯಮಂತ್ರಿ ಸಿದ್ದರಾಮಯ್ಯನವರ (ಸಿಎಂ ಸಿದ್ದರಾಮಯ್ಯ) ದೆಹಲಿ ಭೇಟಿ ಭಾರೀ ಕುತೂಹಲ ಮೂಡಿಸಿದೆ. ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ರಾಹುಲ್ ಗಾಂಧಿಯವರ ಜೊತೆ ಸಚಿವ ಸಂಪುಟದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ರಾಹುಲ್ ಗಾಂಧಿಯವರ ಭೇಟಿ ವೇಳೆ ಬಿಹಾರದ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಾಗಿದೆ. ಫಲಿತಾಂಶದಿಂದ ರಾಹುಲ್ ಗಾಂಧಿ ಬೇಸರಗೊಂಡಿದ್ದರು. ಹೀಗಾಗಿ, ನಾವು ನಿಮ್ಮ ಜೊತೆ ಇದ್ದೇವೆ ಎಂದು ರಾಹುಲ್ ಗಾಂಧಿಗೆ ಧೈರ್ಯ ತುಂಬಿ ಬಂದಿದ್ದೇನೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ. ನಾನು ಮೋದಿಯವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ