ಸ್ಯಾಂಡಲ್‌ವುಡ್ ನಟಿಗೆ ನಿರ್ಮಾಪಕ ಟಾರ್ಚರ್ ನೀಡಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ; ಪೊಲೀಸರು ಹೇಳಿದ್ದೇನು?

ಸ್ಯಾಂಡಲ್‌ವುಡ್ ನಟಿಗೆ ನಿರ್ಮಾಪಕ ಟಾರ್ಚರ್ ನೀಡಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ; ಪೊಲೀಸರು ಹೇಳಿದ್ದೇನು?


ಬೆಂಗಳೂರು, ನವೆಂಬರ್ 16: ಸುಮಾರು 15-20 ದಿನಗಳ ಹಿಂದೆ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಡಲ್‌ವುಡ್ ನಟಿಯೊಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿತ್ತು. ನಟಿಯು ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರೊಂದಿಗೆ ಎರಡು ವರ್ಷಗಳ ಹಿಂದೆ ಸಂಬಂಧ ಹೊಂದಿದ್ದರು. ನಂತರ ಆತನ ವರ್ತನೆ ಅಸಹನೀಯವಾಗಿದ್ದರಿಂದ ನಟಿ ಆತನಿಂದ ದೂರವಾಗಲು ನಿರ್ಧರಿಸಿದ್ದರು. ಆದರೆ ಆರೋಪಿ ನಟಿಗೆ ಮಾನಸಿಕವಾಗಿ ತೊಂದರೆ ನೀಡುವುದರ ಜೊತೆಗೆ ಆಕೆಯ ಫೋಟೋಗಳನ್ನು ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಬೆದರಿಕೆ ಹಾಕಲಾಗುತ್ತಿದೆ.

ಈ ಎಫ್‌ಐಆರ್‌ಡಿ ದಾಖಲಿಸಲಾಗಿದೆ, ಮುಂದಿನ ತನಿಖೆಯನ್ನು ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇಂದು ಬೆಳಗಿನ ಜಾವ ಶ್ರೀಲಂಕಾದಿಂದ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ಆರೋಪಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಲುಕ್ಔಟ್ ಸರ್ಕ್ಯುಲರ್ ಆಧಾರದ ಮೇಲೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಡಿಸಿಪಿ ಗಿರೀಶ್.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *