ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ
ಬೆಂಗಳೂರು, ನವೆಂಬರ್ 16: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂದಿನ ಹೈದರಾಬಾದ್ ಪ್ರವಾಸ ರದ್ದುಪಡಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ದೆಹಲಿಯಲ್ಲೇ ತಂಗಲಿದ್ದಾರೆ. ಇತ್ತ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ಬೆಂಗಳೂರಿನಿಂದ ದೆಹಲಿಗೆ ಹೊರಟಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ರಾಹುಲ್ ಗಾಂಧಿ ಭೇಟಿಗೂ ಡಿ.ಕೆ. ಶಿವಕುಮಾರ್ ಸಮಯ ಕೇಳಿದ್ದಾರೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ದೆಹಲಿ ಪ್ರವಾಸ, ಸೋಮವಾರವೂ ದೆಹಲಿಯಲ್ಲೇ ಡಿಕೆಶಿ ತಂಗಲಿದ್ದಾರೆ. ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಡಿಸಿಎಂ ಡಿಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ರಾಹುಲ್ ಭೇಟಿಯಾಗಿ ವಿಚಾರ ಪ್ರಸ್ತಾಪಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್
ರಾಜ್ಯ ಸಚಿವ ಸಂಪುಟ ಪುನಾರಚನೆ ಬದಲಾಗಿ 4 ಪ್ರಮುಖ ಸ್ಥಾನಗಳ ಬಗ್ಗೆ ಚರ್ಚೆ ನಡೆದಿದೆ. ಬಿ.ನಾಗೇಂದ್ರ, ರಾಜಣ್ಣರಿಂದ ಖಾಲಿಯಾದ ಸ್ಥಾನ ತುಂಬಲು ನಿರ್ಧಾರವಾಗಲಿಲ್ಲ, ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಆಯ್ಕೆ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಕ್ಕಿರುವ ಹಿನ್ನೆಲೆ, ಸಭಾಪತಿ ಸ್ಥಾನದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಇನ್ನೊಂದೆಡೆ ಹೊಸಬರಿಗೆ ಅವಕಾಶ ನೀಡಬೇಕಿರುವ ಕಾರಣ ದೊಡ್ಡ ಪ್ರಮಾಣದಲ್ಲಿ ಪುನಾರಚನೆಗೆ ಹೈಕಮಾಂಡ್ ನಾಯಕರೊಬ್ಬರಿಗೆ ಸಲಹೆ ನೀಡಲಾಗಿದೆ.
ಹಾಲಿ ಸಚಿವರಿಗೆ ಪಕ್ಷದ ಕೆಲಸ ನೀಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದು, ಎಲ್ಲಾ ಆಯ್ಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಮುಕ್ತಗೊಳಿಸಿದೆ. ಸಂಪುಟ ವಿಚಾರವಾಗಿ ನಾಳೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ, ನ.18ರಂದು ಐಸಿಸಿ ಸಂಘದ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ದೆಹಲಿಗೆ ಆಗಮಿಸಲಿದ್ದಾರೆ. ಹೀಗಾಗಿ ವೇಣುಗೋಪಾಲ್ ಜೊತೆ ಚರ್ಚಿಸಿದ ಬಳಿಕ ಐಸಿಸಿ ಅಧ್ಯಕ್ಷ ಮಲ್ಲಿಕಾಜರ್ಜನ ಖರ್ಗೆ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ನಾಳಿನ ಸಚಿವ ಸಂಪುಟದ ಬಗ್ಗೆ ಚರ್ಚೆಯಾಗುವ ನಿರೀಕ್ಷೆಯಿದೆ, ಅಂತಿಮವಾಗಿ ಸಂಪುಟದ ಸ್ವರೂಪದ ಬಗ್ಗೆ ಹೈಕಮಾಂಡ್ ನಿರ್ಧಾರವಾಗಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 9:12 am, ಭಾನುವಾರ, 16 ನವೆಂಬರ್ 25