ಕಬ್ಬು ತುಂಬಿದ ಟ್ರಾಕ್ಟರ್ಗಳಿಗೆ ಬೆಂಕಿ ಹಚ್ಚಿದ ಪ್ರಕರಣ 10 ಜನರನ್ನು ವಶಕ್ಕೆ ಪಡೆದ ಪೊಲೀಸರು
ಬಾಗಲಕೋಟೆ, ನವೆಂಬರ್ 16: ಜಿಲ್ಲೆಯ ರಬಕವಿ ಬನಹಟ್ಟಿಯ ಸಮೀರವಾಡಿ ಬಳಿಯಿರುವ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ (ಕಬ್ಬು ರೈತರ ಪ್ರತಿಭಟನೆ) ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆ ನಡೆದ ಪ್ರಕರಣದಲ್ಲಿ 10 ಜನ ರೈತರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಈ ನಡೆಯನ್ನು ವಿರೋಧಿಸಿ ರೈತರ ತುರ್ತು ಸಭೆಗೆ ಮುಂದಾಗಿದ್ದಾರೆ.
ರೈತರ ವಶಕ್ಕೆ ರೈತ ಮುಖಂಡರ ಖಂಡನೆ
ಕಬ್ಬಿಗೆ ಯೋಗ್ಯ ಬೆಲೆ ನೀಡುವಂತೆ ಸೂಚಿಸಿ ಮುಧೋಳದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಆಕ್ರೋಶ ತೀವ್ರಗೊಂಡ ಪ್ರತಿಭಟನಾಕಾರರು ಕಾರ್ಖಾನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ಈ ಸಂದರ್ಭದಲ್ಲಿ ಕಾರ್ಖಾನೆ ನಿಂತಿದ್ದ ಕಬ್ಬು ತುಂಬಿದ 100ಕ್ಕೂ ಹೆಚ್ಚು ಟ್ರಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಸಂಬಂಧ ಸಿದ್ದಪ್ಪ ಬಳಗಾನೂರ, ಮಲ್ಲು ಮೆಟಗುಡ್ಡ, ರಾಜುಗೌಡ ಪಾಟೀಲ್, ಬಸುನಾಯ್ಕರ್ ಸೇರಿದಂತೆ ಒಟ್ಟು 10 ಮಂದಿ ಮಹಾಲಿಂಗಪುರ ಠಾಣೆಯ ಪೊಲೀಸರನ್ನು ವಿಚಾರಣೆಗೆ ಒಳಪಡಿಸಿದ್ದು, ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ರೋಷಾಗ್ನಿ: 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ
ರೈತರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ರೈತ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಜೊತೆಗೆ ಜಿಎಲ್ಬಿಸಿ ಐಬಿ ಅಧಿಕಾರಿಗಳು ತುರ್ತು ಸಭೆಯನ್ನು ಕರೆಯುತ್ತಾರೆ, ಮುಂದಿನ ಹೋರಾಟದ ತೀವ್ರತೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.
ಇದನ್ನೂ ಓದಿ ಕಣ್ಮುಂದೆ ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಘಟನೆಯ ಹಿನ್ನೆಲೆಯೇನು?
ಸರ್ಕಾರ ನಿಗದಿಪಡಿಸಿದ 330 ರೂಪಾಯಿ ಕಬ್ಬಿನ ಬೆಲೆಗೆ ವಿರೋಧ ವ್ಯಕ್ತಪಡಿಸಿದ್ದ ಮುಧೋಳ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆಯೇ ಮಾತುಕತೆಗೆ ಬರಬೇಕು. ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಎಂದು ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ ಅ.13ರಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಸಕ್ಕರೆ ಸಚಿವ ಶಿವಾನಂದ್ ಪಾಟೀಲ್, ಇಡೀ ರಾಜ್ಯದಲ್ಲಿ ಎಲ್ಲೂ ಕೂಡ ರೈತರು ಹೀಗೆ ಮಾಡಿಲ್ಲ, ಇದು ರೈತರ ಹೆಸರಲ್ಲಿ ಕಿಡಿಗೇಡಿಗಳು ಮಾಡಿದ್ದು ಎಂದಿದ್ದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 12:19 pm, ಭಾನುವಾರ, 16 ನವೆಂಬರ್ 25