ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ: RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ: RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ


ಕಲಬುರಗಿ, ನವೆಂಬರ್ 16: ಇಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ (ಆರ್ಎಸ್ಎಸ್) ಪಥಸಂಚಲನ ನಡೆಸಲಾಗಿದೆ. ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (ಸಚಿವ ಪ್ರಿಯಾಂಕ್ ಖರ್ಗೆ) ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಹಣ RSS ಗೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೀನಿ. ಎಷ್ಟು ಲೂಟಿ ಮಾಡುತ್ತಿರುವುದು ಗೊತ್ತಾಗುತ್ತದೆ. ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ ಎಂದು ಕಿಡಿಕಾರಿದ್ದಾರೆ.

ಆರ್ ಎಸ್ ಎಸ್ ಕಥೆ ಇನ್ನೂ ಬಹಳ ಮುಂಚೆಯೇ ಹೇಳುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಚಿತ್ತಾಪುರದಲ್ಲಿ ಎಸ್ ಎಸ್ ಎಸ್ ಪಥಸಂಚಲನ ಆಯ್ತು. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಶುರುವಾಗಿದೆ. ಆರ್ ಎಸ್ ಎಸ್ ಕಥೆ ಇನ್ನೂ ಬಹಳ ಮುಂಚೆಯೇ ಇದೆ ಎಂದು ಹೇಳುತ್ತೇನೆ. ಚಿತ್ತಾಪುರಕ್ಕೆ 3 ಲಕ್ಷ ಜನ ಬರ್ತಾರೆ ಅಂದ್ರು, ಬಂದ್ರಾ? ಆರ್.ಅಶೋಕ್, ವಿಜಯೇಂದ್ರ ಚಿತ್ತಾಪುರಕ್ಕೆ ಬರ್ತೀವಿ ಅಂದ್ರು, ಬಂದ್ರಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: RSS ದೇಣಿಗೆ ಕುರಿತಾದ ಭಾಗವತ್ ಮಾತಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್: 11 ಪ್ರಶ್ನೆ ಮುಂದಿಟ್ಟ ಸಚಿವ

ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥಾದ್ದರಲ್ಲಿ ಆರ್ ಎಸ್ ಎಸ್ ಹಣದ ಲೆಕ್ಕ ಕೇಳಬಾರದಾ? ಇವರು ಹೇಗೆ ಆದಾಯ ತೆರಿಗೆ ವಂಚಿಸುತ್ತಿದ್ದಾರೆಂದು ದಾಖಲೆ ಸಮೇತ ಬಹಿರಂಗಪಡಿಸುವೆ. ಇವರಿಗೆ ಯಾರೆಲ್ಲ ದೇಣಿಗೆ ಕೊಡುತ್ತಾರೆ, ಲೆಕ್ಕ ಹೇಗೆ ಕೊಡ್ತಾರೆ? ಆರ್ ಎಸ್ ಎಸ್ ದೇಣಿಗೆ ಸಂಗ್ರಹದ ಬಗ್ಗೆ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.

ಆರ್ ಎಸ್ ಎಸ್ ನವರು ಏಕೆ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ?

ಆರ್ ಎಸ್ ಎಸ್ ನವರು ಎಂದಾದರೂ ರೈತರ ಬಗ್ಗೆ ಮಾತಾಡಿದ್ದಾರಾ? ಗಣವೇಷ ಧರಿಸಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರಾ? ಕಬ್ಬಿಗೆ ಎಫ್‌ಆರ್‌ಪಿ ನಿಗದಿ ಮಾಡಿ ಎಂದು ಏಕೆ ಹೋರಾಟ ಮಾಡಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Chittapur RSS Pathsanchalan Live: ಚಿತ್ತಾಪುರದಲ್ಲಿ RSS ಪಥಸಂಚಲನ; ಲೈವ್ ನೋಡಿ

ಇನ್ನು ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ RSS ದೇಣಿಗೆ ವಿಚಾರವಾಗಿ ಟ್ವೀಟ್ ಮಾಡುವ ಮೂಲಕ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪ್ರಶ್ನೆ ಮಾಡಿದ್ದಾರೆ. ​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *