Headlines

ಜಗ್ಗೇಶ್ ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ

ಜಗ್ಗೇಶ್ ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ


ಖ್ಯಾತ ನಟ ಜಗ್ಗೇಶ್ (ಜಗ್ಗೇಶ್) ಅವರು ಚಿತ್ರರಂಗದಲ್ಲಿ ನಾಲ್ಕೂವರೆ ಕಾಣಿಸಿಕೊಂಡ ಅನುಭವ. ಅನೇಕ ಏಳು-ಬೀಳುಗಳನ್ನು ಅವರು ನೋಡಿದ್ದಾರೆ. ಇಂದಿಗೆ (ನವೆಂಬರ್ 17) ‘ನವರಸ ನಾಯಕ’ ಜಗ್ಗೇಶ್ ಅವರು ಚಿತ್ರರಂಗಕ್ಕೆ (ಕನ್ನಡ ಚಲನಚಿತ್ರೋದ್ಯಮ) ಕಾಲಿಟ್ಟು ಬರೋಬ್ಬರಿ 45 ವರ್ಷಗಳು ಕಳೆದಿವೆ. ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಸ್ಟಾರ್ ನಟನಾಗಿ ಯಶಸ್ಸು ಕಂಡಿದ್ದಾರೆ. ಎಷ್ಟೇ ಸಾಧನೆ ಮಾಡಿದರೂ ಕೂಡ ಅವರಿಗೆ ಅವಕಾಶ ಕೊಟ್ಟವರನ್ನು ಮರೆತಿಲ್ಲ. ಸೋಶಿಯಲ್ ಮೀಡಿಯಾ ಮೂಲಕ ಅವರು ಎಲ್ಲವನ್ನೂ ನೆನಪು ಮಾಡಿಕೊಂಡಿದ್ದಾರೆ. ಅವರ ಪೋಸ್ಟ್ ಇಲ್ಲಿದೆ..

‘1980 ನವೆಂಬರ್ 17ನೇ ತಾರೀಖು. ಆಗ ನನಗೆ 18 ವರ್ಷ ವಯಸ್ಸು. ನಾನು ಬಣ್ಣಹಚ್ಚಿ ನಟಿಸಿದ ಚಿತ್ರ ‘ಕನ್ನಡತಿ ಮಾನವತಿ’. ಸ್ಥಳ ಗುಬ್ಬಿ ಚನ್ನಬಸವೇಶ್ವರ ಆಲಯ. ಬಣ್ಣ ಹಚ್ಚಿದವರು ಅಂಬರೀಶ್ ಅವರ ಮೇಕಪ್ ಮಾಡುತ್ತಿರುವ ರಾಮಕೃಷ್ಣ ಹಾಗೂ ಅವರ ಶಿಷ್ಯ ಕೃಷ್ಣ. ಪಾತ್ರ ಕೊಡಿಸಿದವ ನನ್ನ ಮಿತ್ರ ಶಂಭು’ ಎಂದು ಜಗ್ಗೇಶ್ ಅವರು ಆ ದಿನಗಳ ಪುಟ ತೆರೆದಿದ್ದಾರೆ.

‘ನನಗೆ ಮೀಸೆ ಬರೆದವರು ಹಾಸ್ಯನಟ ರನ್ನಾಕರ್. ನಾಯಕ ರಾಮಕೃಷ್ಣ ಚಿತ್ರದ. ನಾಯಕಿ ಪ್ರಮೀಳ ಜೋಯ್ಸ್. ನನ್ನ ಜೊತೆ ನಟಿಸಿದ ನಟಿ ಸಿಹಿಕಹಿ ಗೀತಾ ಅಕ್ಕ. ಚಿತ್ರ ಬಿಡುಗಡೆ ಆಗಲಿಲ್ಲ. ನನ್ನ ಅದೃಷ್ಟ ನಿರ್ದೇಶಕ ಸಿದ್ದಲಿಂಗಯ್ಯ ಅವರ ಮಗ ಮುರಳಿ ಅವರ ಚಿತ್ರ ‘ಬಿಳಿ ಗುಲಾಬಿ’ ಸಿಗಲು ಕಾರಣರಾದ ಪುಟ್ಟಣ್ಣ ಕಣಗಲ್ ಅವರ ಸಹಾಯಕ ನಿರ್ದೇಶಕ ದಿವಂಗತ ಅರಕಲಗೂಡು ನಂಜುಂಡ’ ಅಂಗಡಿ ಜಗ್ಗೇಶ್.

‘ನಂತರ ಕೆ.ವಿ. ಜಯರಾಮ್ ಅವರ ಕೃಪೆಯಿಂದ ಅವರ ‘ಇಬ್ಬನಿ ಕರಗಿತು’ ಸಿನಿಮಾದಲ್ಲಿ ಮುಂದುವರಿದು, 1984ರಲ್ಲಿ ‘ಶ್ವೇತ ಗುಲಾಬಿ’ ಚಿತ್ರದ ಅವಕಾಶ ಸಿಕ್ಕು ನಂತರ ಪರಿಮಳ ನಾನು ಮದುವೆಯಾಗಿ ಸ್ಟೇಷನ್ ಸುಪ್ರೀಮ್ ಕೋರ್ಟು ಅವಾಂತರ ಮುಗಿಸಿ ನಂತರ ನೋಡದೇ ರಾಯರ ಕೃಪೆಯಿಂದ ಅಂದಿನ ಕನ್ನಡದ ಪ್ರೇಮ ಚಪ್ಪಾಳೆಯಿಂದ ವಿವಿಧ ಪಾತ್ರ ಮಾಡುತ್ತಾ ಬೆಳೆದುನಿಂತೆ’ ಎಂದು ಜಗ್ಗೇಶ್ ಬರೆದಿದ್ದಾರೆ.

ಇದನ್ನೂ ಓದಿ: ಆರ್ಟ್ ಆಫ್ ಲಿವಿಂಗ್ ಗೋಶಾಲೆಯಲ್ಲಿ ಕಳೆದ ನಟ ಜಗ್ಗೇಶ್

‘ಇಂದಿಗೆ ನನ್ನ ಸಿನಿಮಾ ಪ್ರಯಾಣಕ್ಕೆ 45 ವರ್ಷ ಆಯುಷ್ಯ. ನಡೆದು ಬಂದ ದಾರಿ ನೆನಪಿನ ಬುತ್ತಿ. ಮುಂದೆಯೂ ನಿಮ್ಮ ಪ್ರೀತಿ ನನ್ನ ಮೇಲಿರಲಿ ಹಾಗೂ ನನ್ನಂತೆ ಮುಂದೆ ಚಿತ್ರರಂಗಕ್ಕೆ ಬರುವ ಹೊಸ ಕಲಾವಿದರು ಹರಸಿ ಬೆಳೆಸಿ. ಶುಭಸಂಜೆ’ ಎಂದು ಜಗ್ಗೇಶ್ ಅವರು ಪೋಸ್ಟ್ ಮಾಡಿದ್ದಾರೆ. ಚಿತ್ರರಂಗದಲ್ಲಿ ಖ್ಯಾತಿ ಪಡೆದ ಅವರು ರಾಜಕೀಯದಲ್ಲೂ ಯಶಸ್ಸು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *