ಮಂಗಳೂರು, ನವೆಂಬರ್ 18: ಮಂಗಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದೆ. ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದೆ, ಈ ಸಂದರ್ಭದಲ್ಲಿ ದೇವಸ್ಥಾನದಿಂದ ತನ್ವೀರ್‌ಗೆ ಅದ್ದೂರಿ ಸ್ವಾಗತವಿದೆ. ಇಂದಿನ ಸರ್ವಧರ್ಮ ಸಮ್ಮೇಳನದಲ್ಲಿ ತನ್ವೀರ್ ಅಹಮ್ಮದ್ ಉಲ್ಲಾ ಪ್ರಮುಖ ಭಾಷಣ ಮಾಡಲಿದ್ದಾರೆ, ಸಚಿವ ಎಂ.ಬಿ. ಪಾಟೀಲ್ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.