Headlines

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಅಯ್ಯಪ್ಪ ಭಕ್ತರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಅಯ್ಯಪ್ಪ ಭಕ್ತರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ


ಬೆಂಗಳೂರು, ನವೆಂಬರ್ 18: ಕೇರಳದಲ್ಲಿ ಶಬರಿಮಲೆ (ಶಬರಿಮಲ) ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಬರಿಮಲೆ ಅಯ್ಯಪ್ಪ ಭಕ್ತರಿಗಾಗಿ ಮಾರ್ಗಸೂಚಿ (ಮಾರ್ಗಸೂಚಿಗಳು) ಬಿಡುಗಡೆ ಮಾಡಿದೆ.

ಕೇರಳದಲ್ಲಿ ನೂರಾರು ಜನರಿಗೆ ಬಾಧಿಸುತ್ತಿರುವ ಈ ವೈರಸ್, ರಾಜ್ಯದಿಂದ ಶಬರಿ ಮಲೆಗೆ ಹೋಗುವ ಭಕ್ತರ ಟೆನ್ಷನ್‌ಗೆ ಕಾರಣವಾಗಿದೆ. ಹೀಗಾಗಿ ಭಕ್ತರ ಆರೋಗ್ಯ ರಕ್ಷಣೆಗೆ ಮುಂದಾಗಿರುವ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಯಲ್ಲಿ ಏನಿದೆ?

  • ನೆಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಮತ್ತು ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆ.
  • ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.
  • ನೆಗ್ಲೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಗಳು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲ ಎಂಬ ಅಪರೂಪದ ಗಂಭೀರ, ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.
  • ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವ್ರ ತಲೆನೋವು, ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿನ ಬದಲಾವಣೆಗಳು ಮತ್ತು ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆಯ ಲಕ್ಷಣಗಳು ಕಂಡುಬಂದರೆ, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆ, ವೈದ್ಯರ ವೈದ್ಯರು.

ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮೀಬಾ ಬೆಳೆಯುತ್ತದೆ. ಒಂದು ವೇಳೆ ನೀರಿನಲ್ಲಿ ಈಜಾಡಿದರೆ, ಆಮೀಬಾವು ಮೂಗಿನ ಮೂಲಕ ನಮ್ಮ ಮೆದುಳನ್ನ ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಕೆ ಹಾನಿಯುಂಟು ಮಾಡುತ್ತದೆ. ಕೆಲವೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು.

ಇದನ್ನೂ ಓದಿ: Video: ಶಬರಿಮಲೆ ಯಾತ್ರೆ ಆರಂಭ, ಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾ ಸೋಂಕಿನ ಭೀತಿ, ಮಾರ್ಗಸೂಚಿ ಬಿಡುಗಡೆ

ಸದ್ಯ ನಮ್ಮರಾಜ್ಯದಲ್ಲಿ ಯಾವ ರೀತಿ ನೆಗ್ಲೇರಿಯಾ ಫೌಲೇರಿ ಸೋಂಕು ಕಾಣಿಸಿಕೊಂಡಿಲ್ಲ. ಆದರೂ ಕೂಡ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *