ಹೈದನ ಕಲಬುರಗಿ ವಿಭಾಗೀಯ ಪೀಠ
ಕಲಬುರಗಿ, ನವೆಂಬರ್ 19: 2019 ರ ಆಗಸ್ಟ್ ತಿಂಗಳಿನಲ್ಲಿ ಚಿತ್ತಾಪುರದಲ್ಲಿ ನಡೆದಿದ್ದ ಪೊಲೀಸರ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಹಿಂಬಾಲಿಸಿದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸಚಿವ ಸಂಪುಟದ ನಿರ್ಧಾರಕ್ಕೆ ನ ಕಲಬುರಗಿ ವಿಭಾಗೀಯ ಪೀಠ ತಾತ್ಕಾಲಿಕ ತಡೆ ನೀಡಿದೆ. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ.
209 ಆಗಸ್ಟ್ ತಿಂಗಳಿನಲ್ಲಿ ನಡೆದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವು ಸಾಗಾಟ ನಡೆಸುತ್ತಿರುವ ವಾಹನದ ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿ ಸೀಜ್ ಮಾಡಲಾಗಿದೆ. ಚಿತ್ತಾಪುರ ಪಟ್ಟಣದ ದಿಗ್ಗಾಂವ ಕ್ರಾಸ್ ಹತ್ತಿರದ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು. ಆದರೆ ವಾಹನ ಬಿಡುವಂತೆ ಚಿತ್ತಾಪುರ ಪೊಲೀಸ್ ಕರ್ತವ್ಯ ನಿರ್ವಹಿಸಿದ ಶೇಖ್ ಮೋಸೀನ್, ಮಹಮ್ಮದ ಫಯಾಜ್, ಮಹಮ್ಮದ ಯೂಸಫ್, ಇಮ್ರಾನ್, ನೂರ್ ಮಹಮ್ಮದ್ ಆಸೀಫ್, ಮಹಮ್ಮದ್ ಝಾಕೀರ್, ಮಹಮ್ಮದ ವಾಜೀದ್, ಮುಜಾಹೀದ್, ಮಹಮ್ಮದ್ ಖಲೀಲ್, ಇಕ್ಬಾಲ್, ರಿಯಾಜ್, ಫಾರೂಖ್, ಬಾಬಾ ಸೌದಾಗಾರ ಸೇರಿದಂತೆ 15-20 ಜನರು. ಈ ಬಗ್ಗೆ ವಿಚಾರಣೆ ಮಾಡಿ ಕಾನೂನು ಕ್ರಮ ಕೈಕೊಳ್ಳಲಾಗುವುದು. ನೀವೆಲ್ಲರೂ ಇಲ್ಲಿಂದ ಹೋಗಿ ಅಂತಾ ಪದೇ ಪದೇ ಹೇಳಿದರೂ ಆರೋಪಿಗಳು ಅದನ್ನು ಲೆಕ್ಕಿಸದೆ ತಮ್ಮ ವಾಹನ ಬಿಡುವಂತೆ ಪಟ್ಟು ಹಿಡಿದಿದ್ದರು. ಬಳಿಕ ಪೊಲೀಸ್ ಠಾಣೆಯ ಮುಂಭಾಗದಿಂದ ಬಸೀರ್ ಗಂಜ್ ಚೌಕ್ ಕಡೆಗೆ ಹೋಗಿ ಏಕಾಏಕಿ ಕಲ್ಲು ತೂರಾಟ ನಡೆಸಲಾಯಿತು.
ಇದನ್ನೂ ಓದಿ: ಇವರಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ; RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಶೇಖ್ ಮೋಸೀನ್ ಎಸೆದ ಕಲ್ಲು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ ಅಭಿಜಿತ್ ಅವರ ಕಾರಿಗೆ ತಾಗಿ ಹಾನಿಯಾಗಿದೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸದೆ ಕಲ್ಲು ತೂರಾಟ ನಡೆಸಿ ವಾಹನ ಜಖಂಗೊಳಿಸಿದ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಈ ಕೇಸ್ ನ ರಾಜ್ಯ ಸರ್ಕಾರ ಈ ವರ್ಷ ಸೆಪ್ಟೆಂಬರ್ ನಲ್ಲಿ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಆದೇಶಕ್ಕೆ ಸದ್ಯ ತಡೆ ನೀಡಿರುವ ಕೋರ್ಟ್, ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿಪಡಿಸಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.