ಬೆಂಗಳೂರು, ನವೆಂಬರ್ 19: ಯಕ್ಷಗಾನ ಕಲಾವಿದರಲ್ಲಿ ಅವರು ಸಲಿಂಗಿಗಳಾಗಿದ್ದರೆ, ಅಲ್ಲಿ ಅಂತಹ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ. ಅದರ ಜೊತೆಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ ಅವರು, ಕೆಲ ಯಕ್ಷಗಾನ ಕಲಾವಿದರು ಸಲಿಂಗಿಗಳು ಹೌದು. ಈ ವಿಚಾರವನ್ನು ನಾನು ಹೊಸದಾಗಿ ಹೇಳುತ್ತಿಲ್ಲ. ನನ್ನ ಉದ್ದೇಶ ಕಲಾವಿದರ ಬದುಕು ಉಜ್ವಲಗೊಳಿಸುವುದು. ಹೀಗಾಗಿ ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾದರೂ ಕ್ಷಮೆ ಕೇಳುತ್ತೇನೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳಲ್ಲಿ ವಿಷಾದ ವ್ಯಕ್ತಪಡಿಸುವೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದಿಂದ ತೆಗೆದರೆ ಹೋಗುತ್ತೇನೆ. ಆದರೆ ನನ್ನ ಉದ್ದೇಶ ಅವಮಾನ ಮಾಡುವುದು ಅಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.