ಬೆಂಗಳೂರು, (ನವೆಂಬರ್ 19): ನಗರದ ಡೈರಿ ಸರ್ಕಲ್ ಫ್ಲೈಓವರ್ ಮೇಲೆ ಎಟಿಎಂ ವಾಹನದಲ್ಲಿದ್ದ ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಗ್ಯಾಂಗ್ ಇನೋವಾ ಕಾರಿನಲ್ಲಿ ಪರಾರಿಯಾಗಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. CMS ಕಂಪನಿ ಮ್ಯಾನೇಜರ್ ದೂರಿನ ಆಧಾರದಲ್ಲಿ ಡಕಾಯಿತಿ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ದರೋಡೆಕೋರರು ಹೇಗೆ ಬಂದು ವಾಹನವನ್ನು ಹೈಜಾಕ್ ಮಾಡಿದರು? ಎಲ್ಲಿಗೆ ಕರೆದೊಯ್ದರು? ಬಳಿಕ ಹೇಗೆ ಹಣ ದೋಚಿಕೊಂಡು ಹೋದರು ಎನ್ನುವ ಬಗ್ಗೆ ಸಿಎಂ ವಾಹನ ಚಾಲಕ ಬಿನೋದ್ ವಿವರಿಸಿದ್ದಾರೆ.
ಇನ್ನು ಸಿಎಂ ಎಸ್ ವಾಹನ ಚಾಲಕ ಬಿನೋದ್ ಘಟನೆಯ ವಿವರ ನೀಡಿದ್ದು, ನಾವು ವಾಹನದಲ್ಲಿ ನಾಲ್ಕು ಜನ ಬಂದ್ವಿ. ಅವರು ಕಾರಲ್ಲಿ ಐದಾರು ಜನ ಬಂದು ನಾವು ಆರ್ ಬಿಐ ನವರು ಎಂದು ಹೇಳಿದರು. ಸಿಎಂಎಸ್ ವಾಹನದಲ್ಲಿದ್ದ ಉಳಿದವರನ್ನ ತಮ್ಮ ಕಾರಲ್ಲಿ ಹತ್ತಿಸಿಕೊಂಡ್ರು. ನನ್ನನ್ನ ಸಿಎಂ ಎಸ್ ವಾಹನದಲ್ಲೇ ಕರೆದುಕೊಂಡು ಹೋಗಿ ಡೈರಿ ಸರ್ಕಲ್ ಬ್ರಿಡ್ಜ್ ಮೇಲೆ ನಿಲ್ಲಿಸಿದರು. ಬಳಿಕ ನನ್ನ ಫೋನ್ ಕಿತ್ತುಕೊಂಡಿದ್ದು, ವಾಹನದಲ್ಲಿದ್ದ ಹಣ ತಮ್ಮ ಕಾರಿಗೆ ಶಿಫ್ಟ್ ಮಾಡಿಕೊಂಡು ಹೋಗಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಅತಿದೊಡ್ಡ ಕಳ್ಳತನ: ಹಾಡಹಗಲೇ ಎಟಿಎಂ ವಾಹನ ಹೈಜಾಕ್, 7.11 ಕೋಟಿ ರೂ. ದರೋಡೆ
ದರೋಡೆಕೋರರ ಪತ್ತೆಗಾಗಿ ತಂಡ ರಚನೆ
ಬೆಂಗಳೂರಿನಲ್ಲಿ ಅತಿದೊಡ್ಡ ದರೋಡೆ ಪ್ರಕರಣ ಇದಾಗಿದೆ. ಇದನ್ನು ಒಳಗೊಂಡಿದ್ದು, ಗೃಹ ಸಚಿವ ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಸೇರಿದ್ದಾರೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದರೋಡೆಕೋರರ ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದ್ದು, ಡಿಸಿಪಿ ಲೋಕೇಶ್ ಜಗಲಾಸರ್ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು, ದರೋಡೆಕೋರರ ಪತ್ತೆಗಾಗಿ ಬೆಂಗಳೂರಿನಾದ್ಯಂತ ನಾಕಾಬಂಧಿ ಹಾಕಲಾಗಿದೆ. ಗಡಿಪ್ರದೇಶದಲ್ಲಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ, ಕಳ್ಳರನ್ನು ನಾವು ಖಂಡಿತ ಹಿಡಿಯುತ್ತೇವೆ. ಈಗಲಷ್ಟೇ ಪ್ರಕರಣದ ಲೀಡ್ ಸಿಕ್ಕಿದೆ. ಇದಕ್ಕೆ ಮೂಲ ಕಾರಣ ಯಾರು? ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದಾರೋ, ಇಲ್ಲವೋ ಅನ್ನೋದು ಗೊತ್ತಿಲ್ಲ. ಈಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ 7 ಕೋಟಿ. ರೂ. ದರೋಡೆ: ಕೆಲ ಶಂಕಿತರ ಫೋಟೋಗಳು ಟಿವಿ9ಗೆ ಲಭ್ಯ
ಆರೋಪಿಗಳು ಬಂದಿರುವ ಕಾರಿನಲ್ಲಿಯೇ ಹಣ ತೆಗೆದುಕೊಂಡು ಹೋಗಿದ್ದಾರೆ. ಕೆಲವು ಮಾಹಿತಿ ಸಿಕ್ಕಿದೆ, ಅದೆಲ್ಲವನ್ನೂ ಹೇಳಲು ಆಗಲ್ಲ. ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಖಂಡಿತವಾಗಿ ಅವರನ್ನು ಹಿಡಿದಿಟ್ಟುಕೊಳ್ಳುತ್ತೇವೆ. ವೆಹಿಕಲ್ ನಂಬರ್ ಎಲ್ಲ ಮಾಹಿತಿ ಸಿಕ್ಕಿದೆ. ಬೆಂಗಳೂರಿನಲ್ಲಿ ಇಂತಹ ಹಾಡುಹಗಲಲ್ಲೇ ನಡೆದಿಲ್ಲ. ಏಳು ಕೋಟಿಗೂ ಹೆಚ್ಚು ಮೊತ್ತದ ಹಣ ರಾಬರಿಯಾಗಿದೆ. ಕಳ್ಳರು ಇಲ್ಲಿಯವರಾ? ಹೊರ ರಾಜ್ಯದ ವ್ಯಕ್ತಿಗಳಾ ಅನ್ನೋದು ಗೊತ್ತಾಗಲಿದೆ.
ಫ್ಲೈ ಓವರ್ ಮೇಲೆಯೇ ಗಾಡಿ ನಿಲ್ಲಿಸಿದ್ದೇಕೆ?
ಖದೀಮರು ಪಕ್ಕಾ ಪ್ಲ್ಯಾನ್ ಮಾಡಿ ಈ ದರೋಡೆ ಮಾಡಿದ್ದಾರೆ. ಅಶೋಕ ಪಿಲ್ಲರ್ನಿಂದ ಸಿದ್ದಾಪುರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ದರೋಡೆ ಸ್ಥಳದಲ್ಲಿ ಯಾವುದೇ ಸಿಸಿಟಿವಿ ಇಲ್ಲ. ಹೀಗಾಗಿ ಅಲ್ಲೇ ಕಾರು ನಿಲ್ಲಿಸಿದ್ದು, ಅದರ ನಂತರ ಬೇರೆ ಕಾರಿನಲ್ಲಿ ಬಂದ ಮೂವರು ದರೋಡೆಕೋರರ ಜೊತೆ ಮಾತುಕತೆ ನಡೆಸಿದ್ದಾನೆ. ಅದಾದ ನಂತರ ಎಟಿಎಂ ವಾಹನವನ್ನು ಕಾರು ಫಾಲೋ ಮಾಡಿದೆ. ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ಎಟಿಎಂ ವಾಹನ ನಿಲ್ಲಿಸಿ ಬಳಿಕ ಅದರಲ್ಲಿದ್ದ ಬರೋಬ್ಬರಿ 7.11 ಕೋಟಿ ರೂ. ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆ ನಡೆದು 45 ನಿಮಿಷದಿಂದ 1 ಗಂಟೆ ತಡವಾಗಿ ಪೊಲೀಸರಿಗೆ ಮಾಹಿತಿ ಸಿಕ್ಕಿರುವುದು ಕೂಡ ಹಲವು ಅನುಮಾನ ಹುಟ್ಟಿಸಿದೆ.
ಶಂಕಿತರ ಫೋಟೋ ಬಿಡುಗಡೆ
ಬೆಂಗಳೂರಿನಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಶಂಕಿತರ ಫೋಟೋ ಬಿಡುಗಡೆ ಮಾಡಿದೆ. ಇನ್ನೋವಾ ಕಾರಿನಲ್ಲಿ ಬಂದ ಆರೋಪಿಗಳ ಪತ್ತೆಗೆ ಖಾಕಿ ಎಚ್ಚರಿಕೆ ನೀಡಲಾಗಿದೆ, ಪ್ರಾಥಮಿಕ ಮಾಹಿತಿ ಅನುನಾರ ಒಟ್ಟು 6 ಮಂದಿ ಆರೋಪಿಗಳ ಪೋಟೋ ಬಿಡುಗಡೆಯಾಗಿದೆ. ಹಳೆ ಆರೋಪಿಗಳು ಮತ್ತು ಕೆಲ ಶಂಕಿತರ ಫೋಟೋ ಬಿಡುಗಡೆ ಮಾಡಿದ್ದರೂ, ನಾಕ ಬಂದಿಯಲ್ಲಿ ಈ ಫೋಟೋದಲ್ಲಿರೋ ವ್ಯಕ್ತಿಗಳ ಫೋಟೋ ಮ್ಯಾಚ್ ಮಾಡುವಂತೆ ಎಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ದರೋಡೆಕೋರರ KA 03 NC 8052 ಕಾರಿನ ಡಿಟೇಲ್ಸ್
ಬೆಂಗಳೂರು ಪೂರ್ವ(ಇಂದಿರಾನಗರ) RTO ಕಚೇರಿಯಲ್ಲಿ ನೊಂದಣಿ. ಜನವರಿ 2018 ರಲ್ಲಿ ಈ ಕಾರು ನೊಂದಣಿಯಾಗಿದೆ. ದರೋಡೆ ಮಾಡೋಕೆ ಅಂತಾನೆ ನಕಲಿ ನಂಬರ್ ಪ್ಲೇಟ್ ಬಳಕೆ ಮಾಡಲಾಗಿದೆ. ದರೋಡೆ ಮಾಡಿ ಪರಾರಿಯಾಗುವಾಗ ಸಿಕ್ಕಿಕೊಳ್ಳಬಾರದೆಂದು ನಕಲಿ ನಂಬರ್ ಪ್ಲೇಟ್ ಬಳಕೆ ಮಾಡಲಾಗಿದೆ. ಸ್ವಿಫ್ಟ್ ಕಾರಿನ ನಂಬರ್ ಪ್ಲೇಟ್ ಅನ್ನು ಇನ್ನೋವಾ ಕ್ಯಾರಿಗೆ ಬಳಸಲಾಗಿದೆ. ಪಿ.ಬಿ. ಗಂಗಾಧರನ್ ಅವರ ಹೆಸರಿನಲ್ಲಿ ಕಾರು ನೊಂದಣಿಯಾಗಿದೆ. ಬೆಂಗಳೂರಿನ ತಿಪ್ಪಸಂದ್ರ ವಿಳಾಸದಲ್ಲಿ ನೊಂದಣಿಯಾಗಿರುವ ಕಾರನ್ನು ಗರುಡಾ ಆಟೋ ಕ್ರಾಫ್ಟ್ ಲಿಮಿಟೆಡ್ ಶೋರೂಂನಿಂದ ಖರೀದಿಸಲಾಗಿದೆ. ಸ್ವಿಫ್ಟ್ VDI ಮಾಡೆಲ್ ನ ಸ್ವಿಫ್ಟ್ ಕಾರು. ಸಿಲ್ಕಿ ಬಣ್ಣದ ಭಾರತ್ ಸ್ಟೇಜ್ 4 ರ ಕಾರು. ಕಾರ್ ಮೇಲೆ ಗೌರ್ಮೆಂಟ್ ಆಫ್ ಇಂಡಿಯಾ ಅಂತ ಬರೆಯಲಾಗಿದೆ.
35 ನಿಮಿಷ ತಡವಾಗಿ ಮಾಹಿತಿ ನೀಡಿದ್ದ ಸಿಬ್ಬಂದಿ
12:35 ಸಿಎಂ ಎಸ್ ವಾಹನದಿಂದ ಹಣ ದೋಚಿಕೊಂಡು ಹೋಗಲಾಗಿದೆ. ಆ ವೇಳೆ ಸಿಎಂ ಡ್ರುವರ್ ಬಿನೋದ್ ಸ್ಥಳದಲ್ಲಿದ್ದ. ಉಳಿದ ಮೂವರನ್ನ ಬೇರೆ ಕಾರಿನಲ್ಲಿ ಇಡಲಾಗಿದೆ. ಬಳಿಕ ಒಬ್ಬೊಬ್ಬರನ್ನು ಒಂದೊಂದು ಕಡೆ ಇಳಿಸಿದ್ದ ದರೋಡೆಕೋರರು, ನಾಲ್ವರ ಬಳಿಯೂ ಮೊಬೈಲ್ ಕಸಿದುಕೊಂಡಿದ್ದರು. ನಂತರ ಅಫ್ತಾಬ್, ಮಧ್ಯಾಹ್ನ 1:16 ನಿಮಿಷಕ್ಕೆ ಕಚೇರಿಗೆ ಕರೆ ಮಾಡಿ ನಮ್ಮನ್ನು RBI ನವರು ಅಡ್ಡ ಹಾಕಿದ್ದಾರೆ. ರೂಲ್ಸ್ ಬ್ರೇಕ್ ಮಾಡಿದ್ದೇವೆ ಎಂದು ಹಣದ ಸಮೇತ ಗಾಡಿ ತೆಗೆದುಕೊಂಡಿದ್ದಾರೆ. ಡ್ರೈವರ್ ಗೆ ಈಗ ಕರೆ ಮಾಡಿದ್ರೆ ರಿಸಿವ್ ಮಾಡುತ್ತಿಲ್ಲ. ನನ್ನನ್ನ ಇಲ್ಲೆ ಇಳಿಸಿ ಹೋಗಿದ್ದಾರೆ ಎಂದು ಹೇಳಿದ್ದಾರೆ. ಆಗಲೇ ಬ್ಯಾಂಕ್ ಮ್ಯಾನೇಜರ್ ಗೊತ್ತಾಗಿದ್ದು ಎಟಿಎಂ ಹಣ ರಾಬರಿ ಎಂದು. ಆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಿಎಂಎಸ್ ಏಜೆನ್ಸಿ ಅಧಿಕಾರಿ ಹೇಳಿದ್ದಾರೆ
ಘಟನಾ ಸ್ಥಳದಲ್ಲಿ ಸಿಎಂಎಸ್ ಏಜೆನ್ಸಿ ಅಧಿಕಾರಿ ನಟರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂಎಸ್ ಏಜೆನ್ಸಿ ವಾಹನದಲ್ಲಿದ್ದ ಎಲ್ಲಾ ನಗದು ದರೋಡೆ ಇದೆ. ಮಧ್ಯಾಹ್ನ 12.30 ರಿಂದ 1 ಗಂಟೆಯೊಳಗೆ ದರೋಡೆ ನಡೆದಿದೆ. ಸಿಎಂಎಸ್ ಏಜೆನ್ಸಿ ವಾಹನಕ್ಕೆ ಜಿಪಿಎಸ್ ವ್ಯವಸ್ಥೆ ಇದೆ. CMS ಏಜೆನ್ಸಿ ಸಿಬ್ಬಂದಿ ಭಾಗಿ ಬಗ್ಗೆ ಗೊತ್ತಿಲ್ಲ, ತನಿಖೆಯಲ್ಲಿ ಗೊತ್ತಾಗುತ್ತೆ. ಮಧ್ಯಾಹ್ನ 12.21ಕ್ಕೆ ಜೆ.ಪಿ.ನಗರದ ಎಚ್ಡಿಎಫ್ಸಿ ಬ್ಯಾಂಕ್ನಿಂದ ಹಣ ತಗೊಂಡಿದ್ದು, ಗೋವಿಂದರಾಜಪುರ ಶಾಖೆಗೆ ಹಣ ತಲುಪಿಸಲು ಹೋಗು. ಇಬ್ಬರು ಗನ್ ಮ್ಯಾನ್, ಚಾಲಕ, ಮತ್ತೋರ್ವ ಸಿಬ್ಬಂದಿ ಇಬ್ಬರು. ದರೋಡೆ ಬಳಿಕ ಮಧ್ಯಾಹ್ನ 1 ಗಂಟೆ ವೇಳೆಗೆ ಬ್ರ್ಯಾಂಚ್ ಮ್ಯಾನೇಜರ್ಗೆ ಕರೆ ಮಾಡಿದ್ದಾರೆ. ಬಳಿಕ ಡಿಜಿ ಕಂಟ್ರೋಲ್ ರೂಂಗೆ, ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ಒದಗಿಸಲಾಗಿದೆ. ಮಾಹಿತಿ ಅಗತ್ಯವಿರುವ ಸ್ಥಳಕ್ಕೆ ಬಂದ ಆಯ್ಕೆಯನ್ನು ಸೂಚಿಸುತ್ತದೆ.
ದರೋಡೆಕೋರರು ಮೊಬೈಲ್ ಕಸಿದುಕೊಂಡಂತೆ ಮಾಹಿತಿ ನೀಡೋದು ವಿಳಂಬವಾಗಿದೆ. ನಗದು ದರೋಡೆ ಮಾಡುವವರೆಗೂ ಸಿಬ್ಬಂದಿಗೆ ಮೊಬೈಲ್ ಕೊಟ್ಟಿರಲಿಲ್ಲ. ನಮಗೂ ಕೆಲ ಅನುಮಾನಗಳಿವೆ, ಸಿಬ್ಬಂದಿ 7-8 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ನಾಲ್ವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಫುಲ್ ನಾಕಾಬಂಧಿ
ಬೆಚ್ಚಿಬೀಳಿಸುವ ದರೋಡೆ ಬೆಂಗಳೂರಿನಾದ್ಯಂತ ನಾಕಾಬಂಧಿ ಹಾಕಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಮತ್ತು ಡಿಸಿಪಿಯಿಂದ ತನಿಖೆ ನಡೆಯುತ್ತಿದೆ, ಅವ್ರ ಬಳಿ ಇದ್ದ ಗನ್ ಯಾಕೆ ಬಳಕೆ ಮಾಡಿಲ್ಲ ಎಂಬ ಪ್ರಶ್ನೆ ಇದೆ. ಈ ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದೆ. ಸದ್ಯ ಚಾಲಕ, ಇಬ್ಬರು ಗನ್ ಮೆನ್ ಗಳು ಹಾಗೂ ಹಣ ಡೆಪಾಸಿಟ್ ಮಾಡುವ ಸಿಬ್ಬಂದಿಯ ವಿಚಾರಣೆ ನಡೆಯುತ್ತಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂದಿಸ್ತಾವೆ ಎಂದು ನಗರ ಪೊಲೀಸ್ ಆಯುಕ್ತ ಸಿನ್ಮತ್ ಕುಮಾರ್ ಸಿಂಗ್.
ರಂದು ಪ್ರಕಟಿಸಲಾಗಿದೆ – 8:04 pm, ಬುಧವಾರ, 19 ನವೆಂಬರ್ 25