ನವದೆಹಲಿ, ನವೆಂಬರ್ 19: ಪಾಕಿಸ್ತಾನದ ಉಗ್ರ ಸಂಘಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿಪಡೆದಿತ್ತು. ಅದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ್ (ಆಪರೇಷನ್ ಸಿಂಧೂರ್) ನಡೆಸಿತ್ತು. ಬಳಿಕ ಪಾಕಿಸ್ತಾನವೇ ಬೇಡಿಕೊಂಡ ನಂತರ ಕದನವಿರಾಮ ಘೋಷಿಸಲಾಗಿದೆ. ಇದೀಗ ಕಳೆದ ವಾರ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಬಾಂಬ್ ದಾಳಿಯ ಹಿಂದೆಯೂ ಪಾಕಿಸ್ತಾನದ ಸಂಘಟನೆಗಳ ಕೈವಾಡವಿದೆ ಎಂಬ ಸತ್ಯ ಹೊರಬಿದ್ದಿದೆ. ಪಾಕಿಸ್ತಾನದ (ಪಾಕಿಸ್ತಾನ) ರಾಜಕಾರಣಿ ಚೌಧರಿ ಅನ್ವರುಲ್ ಹಕ್ ಔಟ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನಕ್ಕೆ ಸಂಬಂಧಿಸಿದ ಭಯೋತ್ಪಾದಕ ಗುಂಪುಗಳು ಭಾರತದಲ್ಲಿ “ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ” ದಾಳಿಗಳನ್ನು ನಡೆಸಿವೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಅವರ ಈ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ, ಜಗತ್ತಿನ ಮುಂದೆ ಮತ್ತೊಮ್ಮೆ ಪಾಕಿಸ್ತಾನವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ.
ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರ್ ಬಾಂಬ್ ದಾಳಿಯಲ್ಲಿ 14 ಜನರು ಸಾವನ್ನಪ್ಪಿದ್ದರು. ಇದರ ಜೊತೆಗೆ ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಗುಂಡಿಕ್ಕಿ ಕೊಂಡ ಘಟನೆಯನ್ನು ಉಲ್ಲೇಖಿಸಿ ಅನ್ವರುಲ್ ಹಕ್ ಈ ಹೇಳಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ: ದಾರಿ ತಪ್ಪಿದ ಮುಸ್ಲಿಮರು; ದೆಹಲಿ ಸ್ಫೋಟದ ಆರೋಪಿ ವಿಡಿಯೋಗೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪ್ರತಿಕ್ರಿಯೆ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಅನ್ವರು ಹಕ್ ಹೀಗೆ ಹೇಳಿದ್ದಾರೆ, “ನೀವು ನಮ್ಮನ್ನು ಟಾರ್ಗೆಟ್ ಮಾಡುತ್ತಲೇ ಇದ್ದರೆ ನಾವು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ಭಾರತವನ್ನು ಹೊಡೆಯುತ್ತೇವೆ ಎಂದು ನಾನು ಮೊದಲೇ ಹೇಳಿದ್ದೇನೆ. ಅಲ್ಲಾಹನ ದಯೆಯಿಂದ, ನಾವು ಅದನ್ನು ಮಾಡಿದ್ದೇವೆ. ಅವರ ಈ ಹೇಳಿಕೆ ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ಸ್ಪಷ್ಟ ಬೆಂಬಲವಿದೆ.
ಕೆಂಪು ಕೋಟೆ ಕಾರ್ ಸ್ಫೋಟದ ಘಟನೆಯ ಪ್ರಮುಖ ಬೆಳವಣಿಗೆಯಲ್ಲಿ, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಮಾಜಿ ‘ಪ್ರಧಾನಿ’ ಚೌಧರಿ ಅನ್ವರುಲ್ ಹಕ್ ಅವರು ಭಾರತದ ರಾಜಧಾನಿಯಲ್ಲಿ ಭೀಕರ ಬಾಂಬ್ ಸ್ಫೋಟವನ್ನು ತಮ್ಮ “ಶಹೀನರು” ನಡೆಸಿದ್ದಾರೆ ಎಂದು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. pic.twitter.com/6x1E0otJ82
— VKS (@VikasKumar33707) ನವೆಂಬರ್ 19, 2025
ಬಲೂಚಿಸ್ತಾನದಲ್ಲಿನ ಅಶಾಂತಿಗೆ ಭಾರತವನ್ನು ದೂಷಿಸುವ ಪಾಕಿಸ್ತಾನದ ಪ್ರಯತ್ನಗಳನ್ನು ಭಾರತ ನಿರಂತರವಾಗಿ ತಿರಸ್ಕರಿಸಿದೆ. ಇಸ್ಲಾಮಾಬಾದ್ ತನ್ನ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟುಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಹೇಳಿಕೆಗಳನ್ನು ಬಳಸಲಾಗುತ್ತಿದೆ ಮತ್ತು ಭಾರತದಲ್ಲಿ ಭಯೋತ್ಪಾದನೆಯನ್ನು ಹೆಚ್ಚಿಸುತ್ತಿದೆ ಎಂದು ಭಾರತ ಟೀಕಿಸಿದೆ.
ಇದನ್ನೂ ಓದಿ: ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ! ಎಲ್ಲೆಲ್ಲ ಇವೆ ಗೊತ್ತೇ?
ಅಂದಹಾಗೆ, ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲ ಬಹಿರಂಗಗೊಂಡಿರುವುದು ಇದೇ ಮೊದಲಲ್ಲ. ಇತ್ತೀಚೆಗೆ, ಖೈಬರ್ ಪಖ್ತುನ್ಖ್ವಾ ಮುಖ್ಯಮಂತ್ರಿ ಸೊಹೈಲ್ ಅಫ್ರಿದಿ ಇಸ್ಲಾಮಾಬಾದ್ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ಭಯೋತ್ಪಾದಕ ಘಟನೆಗಳನ್ನು ತಯಾರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 9:55 pm, ಬುಧವಾರ, 19 ನವೆಂಬರ್ 25