ಬೆಂಗಳೂರು, (ನವೆಂಬರ್ 19): ಶಬರಿಮಲೆಯಲ್ಲಿ ಈ ವರ್ಷದ ಮಂಡಲ ಪೂಜೆ, ಮಕರವಿಳಕ್ಕು ಉತ್ಸವ ಶುರುವಾಗಿದೆ. ಜ್ಯೋತಿ ಮಾಸಾಚರಣೆಗಾಗಿ ಗರ್ಭಗುಡಿ ಬಾಗಿಲು ತೆರೆದ ಎರಡೇ ದಿನಗಳಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ಅವ್ಯವಸ್ಥೆಯ ಆಗರವೇ ಸೃಷ್ಟಿಯಾಗಿದೆ. ಅತಿಯಾದ ಜನಸಂದಣಿಯಿಂದಾಗಿ ಮಹಿಳಾ ಮಾಲಾಧಾರಿ ನಟಿಯಾಗಿದ್ದಾರೆ. ಕ್ಷೇತ್ರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿರುವ ಆರೋಪ ಕೇಳಿ ಬಂದಿದ್ದು, ಕೇರಳ ಸರ್ಕಾರ ಮತ್ತು ಶಬರಿಮಲೆ ದೇವಸ್ಥಾನ ಆಡಳಿತ ಮಂಡಳಿಯನ್ನು ಕೇರಳ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇನ್ನು ಶಬರಿಮಲೆಗೆ ತೆರಳಲು ಪ್ಲ್ಯಾನ್ ಮಾಡಿಕೊಂಡಿರುವ ಅಯ್ಯಪ್ಪ ಭಕ್ತರಿಗೆ ವಿಶೇಷ ಮನವಿ ಮಾಡಲಾಗಿದೆ.