ಕಲಬುರಗಿ, ನವೆಂಬರ್ 21: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್ ಅವರನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಏನಿದು ಪ್ರಕರಣ?
ನಾಟಿ ಔಷಧ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಆರೋಪಿ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ