ನವೆಂಬರ್ ಕ್ರಾಂತಿ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶಕ್ಕೆ ಡಿಕೆಶಿ ಶುಭ ಹಾರೈಕೆ

ನವೆಂಬರ್ ಕ್ರಾಂತಿ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶಕ್ಕೆ ಡಿಕೆಶಿ ಶುಭ ಹಾರೈಕೆ


ಬೆಂಗಳೂರು, (ನವೆಂಬರ್ 21): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (ಕಾಂಗ್ರೆಸ್ ಸರ್ಕಾರ) ಎರಡು ವರ್ಷ ಭರ್ತಿಯಾಗಿದ್ದರೂ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿಕೆ ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಸಚಿವ ರಹಸ್ಯ ಸಭೆ ನಡೆಸಿದ್ದು, ಕರ್ನಾಟಕ ಕಾಂಗ್ರೆಸ್ ನಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ಈ ಬಣದ ರಾಜಕೀಯ ಚಟುವಟಿಕೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಕಳೆದ ಎರಡು ವರ್ಷಗಳಿಂದ ಸಾಕಷ್ಟು ಕ್ರೀಡಾಕೂಟ ನಡೆದಿದೆ. ನಾಲ್ವರು ಡಿಸಿಎಂ ಮಾಡಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬದಲಿಸಬೇಕು. ಸಂಪುಟಕ್ಕೆ ಸೇರಿಸಿಕೊಳ್ಳಲು ಸಾಕಷ್ಟು ಡಿನ್ನರ್ ಸಭೆ ನಡೆದಿವೆ. ಸಚಿವರ ಡಿನ್ನರ್ ಕೂಡ ಅದರ ಒಂದು ಭಾಗವೇ ಎಂದು ಮಾರ್ಮಿಕವಾಗಿ ಹೇಳಿದರು.

ಇನ್ನು ಇದೇ ವೇಳೆ 5 ವರ್ಷ ನಾನೇ ಆಗುತ್ತೇನೆಂದು ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಹೇಳಿಕೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶುಭಾಶಯ ಹೇಳುತ್ತೇನೆ. ಅವರಿಗೆ ಎಲ್ಲವೂ ಒಳ್ಳೆಯದಾಗಲಿ ಎಂದು ಹಾರೈಸಿದರು. ಈ ಮೂಲಕ ಸಿಎಂ ಆಗಿ ಸಿಎಂ ಆಗುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.



Source link

Leave a Reply

Your email address will not be published. Required fields are marked *