ಆನೇಕಲ್, ನವೆಂಬರ್ 21: ಇದೇ ತಿಂಗಳ 6ನೇ ತಾರೀಕು ಆನೇಕಲ್ ತಾಲೂಕಿನ ಬನ್ನೇರಘಟ್ಟ ಠಾಣಾ ವ್ಯಾಪ್ತಿಯ ಕಗ್ಗಲೀಪುರ ರಸ್ತೆ ಬದಿಯ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಇದ್ದ ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ. ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ಕಳ್ಳತನಕ್ಕೂ ಇಳಿದಿದ್ದ ತಮ್ಮನ ಕಾಟ ತಾಳಲಾರದೆ ಒಡ ಹುಟ್ಟಿದವನನ್ನು ಅಣ್ಣನೇ ಮರ್ಡರ್ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಕಬುರಗಿ ಮೂಲದ ಧನರಾಜ್(24) ಕೊಲೆಯಾದ ವ್ಯಕ್ತಿ, ಆತನ ಸಹೋದರ ಶಿವರಾಜ್ ಮತ್ತು ಸ್ನೇಹಿತರನ್ನು ಬಂಧಿಸಲಾಗಿದೆ. ಆರೋಪಿಗಳ ಹೆಡೆಮುರಿ ಕಟ್ಟಿದ ಆರೋಪಿಗಳನ್ನು ಬಂಧಿಸಿರುವ ಸಿಸಿ ಕ್ಯಾಮರಾ ದೃಶ್ಯಾವಳಿ.
ಕೊಲೆಯಾದ ಧನರಾಜ್ ಕಲಬುರಗಿಯಲ್ಲಿಯೇ ತಂದೆ-ತಾಯಿಯ ಜೊತೆ ವಾಸವಿದ್ದ. ಕೆಲಸಕ್ಕೆ ಹೋಗದೆ ಕಳ್ಳತನ ಮಾಡೋದರ ಜೊತೆಗೆ, ಕುಡಿದು ಬಂದು ಹೆತ್ತವರ ಮೇಲೆ ನಿತ್ಯ ಹಲ್ಲೆ ಮಾಡ್ತಿದ್ದ. ಪ್ರಶ್ನೆ ಮಾಡಿದ ಸಹೋದರ ಶಿವರಾಜನ ಮೇಲೂ ಹಲವು ಬಾರಿ ಹಲ್ಲೆ ನಡೆಸಿದ್ದು, ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದ. ಮೊಬೈಲ್, ಕುರಿ ಸೇರಿದಂತೆ ಸಿಕ್ಕ ಸಿಕ್ಕ ಕಡೆ ಈತ ಕಳ್ಳತನ ಮಾಡುತ್ತಿದ್ದ. ಈತನ ಕೆಲಸದಿಂದಾಗಿ ಅದೆಷ್ಟೋ ಬಾರಿ ಮನೆ ಬಳಿ ಬಂದು ಜನರು ಗಲಾಟೆ ಮಾಡಿದ್ದರು. ಹೀಗಾಗಿ ಸಹೋದರ ಧನರಾಜ್ ಕಾಟ ತಾಳಲಾರದೆ ಆತನ ಕೊಲೆಗೆ ಸ್ನೇಹಿತರ ಜೊತೆ ಸೇರಿ ಶಿವರಾಜ್ ಪ್ಲ್ಯಾನ್ ಮಾಡಿದ್ದರು. ಅದರ ಭಾಗವಾಗಿ ಕೆಲಸ ಕೊಡಿಸೋದಾಗಿ ಹೇಳಿ ಧನರಾಜ್ ಅವರನ್ನು ಬೆಂಗಳೂರಿಗೆ ಕರೆದಿದ್ದರು. ಬೆಂಗಳೂರಿಗೆ ಬಂದ ಧನರಾಜ್ ಕಾರಿನಲ್ಲಿ ಕುಳಿತು ಮೊಬೈಲ್ ನೋಡುತ್ತಿದ್ದ ವೇಳೆ ಆತನ ಕೈಗಳನ್ನು ಹಿಂಬದಿಯಿಂದ ಶಿವರಾಜ್ ಸ್ನೇಹಿತರಾದ ಸಂದೀಪ್ ಮತ್ತು ಪ್ರಶಾಂತ್ ಹಿಡಿದುಕೊಂಡಿದ್ದಾರೆ. ಈ ವೇಳೆ ಮಚ್ಚಿನಿಂದ ಧನರಾಜ್ ಕತ್ತಿನ ಭಾಗಕ್ಕೆ ಹೊಡೆದು ಕಾರಿನಲ್ಲಿಯೇ ಶಿವರಾಜ್ ಕೊಲೆ ಮಾಡಿದ್ದಾನೆ. ಬಳಿಕ ಕಗ್ಗಲೀಪುರ ರಸ್ತೆ ಬದಿಯ ಪೊದೆಯಲ್ಲಿ ಶವ ಎಸೆದು ಆರೋಪಿಗಳು ಎಸ್ಕೇಪ್ ಆಗಿದ್ದರು.
ಇದನ್ನೂ ಓದಿ: ಸಹೋದ್ಯೋಗಿಯೊಂದಿಗೆ ಅರಣ್ಯಾಧಿಕಾರಿಗೆ ಅಕ್ರಮ ಸಂಬಂಧ, ಪತ್ನಿ, ಮಕ್ಕಳನ್ನೇ ಕೊಂದು ಹೂತು ಹಾಕಿದ್ದ ವ್ಯಕ್ತಿ
ಪ್ರಕರಣ ಸಂಬಂಧ ತನಿಖೆ ವೇಳೆ ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿದ್ದ ಸಿಸಿಗಳ ಪರಿಶೀಲನೆ ನಡೆಸಿದಾಗ ಆರೋಪಿಗಳು ಶವ ಎಸೆದುರೋದು ಗೊತ್ತಾಗಿದೆ. ಆರೋಪಿಗಳನ್ನು ಬಂಧಿಸಲಾಗಿದೆ. ನಿತ್ಯಕುಲ ಕೊಡುತ್ತಿದ್ದ ಕಿರಿಯ ಮಗನ ಸಾವಿನ ಬಗ್ಗೆ ತಲೆ ಕೆಡಿಸಿಕೊಳ್ಳದ, ಕುಟುಂಬಕ್ಕೆ ಆಧಾರವಾಗಿರಲಿಲ್ಲ, ಹಿರಿಯ ಮಗ ಶಿವರಾಜನಿಗೆ ನ್ಯಾಯಾಂಗದ ಕುಣಿಕೆಯಿಂದ ಪಾರು ಮಾಡುವಂತೆ ಬೇಡಿಕೊಂಡಿದ್ದಾನೆ. ಆದರೆ, ಬನ್ನೇರು ಘಟ್ಟದಲ್ಲಿ ಆರೋಪಿಗಳನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.