ಹುಡುಗಿಗಾಗಿ ವಿಧಾನಸೌಧ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್​ ಅಂದರ್

ಹುಡುಗಿಗಾಗಿ ವಿಧಾನಸೌಧ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್​ ಅಂದರ್


ಬೆಂಗಳೂರು, ನವೆಂಬರ್ 21: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧ (ವಿಧಾನ ಸೌಧ) ಮುಂದೆ ಗುಂಪು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ನೇಪಾಳಿ ಯುವಕರನ್ನು (ನೇಪಾಳಿ ಗ್ಯಾಂಗ್) ಬಂಧಿಸಿದ್ದಾರೆ. ಘಟನೆಯ ಹಿಂದೆ ಹಲವು ರೋಚಕ ವಿಚಾರಗಳು ಬೆಳಕಿಗೆ ಬಂದಿವೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಕಳೆದ ಭಾನುವಾರ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ ಮುಂಭಾಗ ಎರಡು ಗುಂಪುಗಳ ನಡುವೆ ಭೀಕರ ಮಾರಾಮಾರಿ ನಡೆದಿತ್ತು. ವಿಧಾನಸೌಧ ಲೈಟಿಂಗ್ಸ್ ನೋಡಲು ಬಂದಿದ್ದ ನೇಪಾಳ ಮೂಲದ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡು ಗಲಾಟೆ ಮಾಡಿದ್ದರು. ನೇಪಾಳಿ ಯುವಕರ ಗಲಾಟೆ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಅತಿ ಹೆಚ್ಚು ಭದ್ರತೆ ಇರುವಂತಹ ವಿಧಾನಸೌಧ ಮುಂಭಾಗದಲ್ಲಿ ಇಂತಹ ಘಟನೆ ನಡೆದಿದ್ದಕ್ಕೆ ಪೊಲೀಸ್ ಇಲಾಖೆಗೆ ಕೂಡ ತಲೆ ಬಿಸಿ ತಂದೊಡ್ಡಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿದ ವಿಧಾನಸೌಧ ಠಾಣೆ ಪೊಲೀಸರು 11 ಮಂದಿ ಯುವಕರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಒಡ ಹುಟ್ಟಿದವನಿಗೇ ಚಟ್ಟ ಕಟ್ಟಿದ ಅಣ್ಣ: ನಮ್ಮಿಂದ ಕರೆಸಿ ತಮ್ಮನ ಡೆಡ್ಲಿ ಮರ್ಡರ್

ಅಂದಹಾಗೆ ಈ ನೇಪಾಳಿ ಯುವಕರಿಗೆ ರೀಲ್ಸ್ ಮಾಡುವ ಹುಚ್ಚು. ಪ್ರತಿ ಶನಿವಾರ ಮತ್ತು ಭಾನುವಾರ ಕೆಲಸಗಳಿಗೆ ರಜೆ ಮತ್ತು ಅವರ ಕೆಲಸದ ಶಿಫ್ಟ್ ಇಲ್ಲದಾಗ ನಗರದ ಪ್ರಮುಖ ಆಕರ್ಷಣೀಯ ಸ್ಥಳಗಳಿಗೆ ಹೋಗಿ ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ. ಇದರಿಂದ ನೇಪಾಳದಲ್ಲಿ ಹೆಚ್ಚು ವೀವ್ಸ್ ಕೂಡ ಬರುತ್ತಿದೆ.

ಯುವತಿಯನ್ನ ಕೀಚಾಯಿಸಿದ ಗ್ಯಾಂಗ್

ಕಳೆದ ಭಾನುವಾರ ಸಂಜೆ ವಿಧಾನಸೌಧ ಲೈಟಿಂಗ್ಸ್ ನೋಡಿಕೊಂಡು ರೀಲ್ಸ್ ಮಾಡಲು ಒಂದು ಗ್ಯಾಂಗ್ ಬಂದಿದೆ. ರೀಲ್ಸ್ ಮಾಡುತ್ತಿರುವ ವಿಚಾರ ತಿಳಿದು ಇನ್ನೊಂದು ಗ್ಯಾಂಗ್ ಕೂಡ ಅಲ್ಲಿಗೆ ಬಂದಿದೆ. ಈ ವೇಳೆ ಒಂದು ಗ್ಯಾಂಗ್ ನ ಯುವತಿಯನ್ನ ಕೀಚಾಯಿಸಿದರು ಅಂತಾ ಎರಡು ಗ್ಯಾಂಗ್ ನಡುವೆ ಗಲಾಟೆಯಾಗಿದೆ. ಹಾಗೂ ಈ ಹಿಂದೆ ಮೊಬೈಲ್ ಕಿತ್ತುಕೊಂಡು ಗಲಾಟೆ ಮಾಡುವಂತೆ, ಎರಡ್ಮೂರು ವಿಚಾರಕ್ಕೆ ಎರಡು ಗುಂಪಿನ ಯುವಕರು ಕೈಗೆ ಸಿಕ್ಕ ವಸ್ತುಗಳು, ಹೆಲ್ಮೆಟ್ ನಿಂದ ಹೊಡೆದಾಡಿಕೊಂಡಿದ್ದಾರೆ.

ಬಳಿಕ ಹಚ್ಚಿದ ವಿಡಿಯೋದಲ್ಲಿದ್ದ ಯುವಕರನ್ನ ಪತ್ತೆ ಹಚ್ಚಿ 11 ಜನರನ್ನ ಬಂಧಿಸಿದ್ದಾರೆ. ಧರ್ಮೇಂದರ್, ರಾಹುಲ್ ಸಿಂಗ್, ಚಾವಿ, ಮನೋಜ್ ಶಾಹಿ, ಉಪೇಂದ್ರ ಚೌಲಾಗೈ, ಸುದೀಪ್ ಅಧಿಕಾರಿ ಸೇರಿ 11 ಮಂದಿಯನ್ನ ಬಂಧಿಸಲಾಗಿದೆ.

ಇದನ್ನೂ ಓದಿ: ಜೀವ ತೆಗೆದ ಫ್ಲೆಕ್ಸ್: ಗೆಳೆಯನ ಮದ್ವೆಗೆಂದು ಜರ್ಮನಿಯಿಂದ ಬಂದ ಯುವಕ ದುರಂತ ಸಾವು

ಇನ್ನು ಬಂಧಿತ ಆರೋಪಿಗಳು, ಬಾಣಸವಾಡಿ ಸುತ್ತಮುತ್ತ ಮನೆಗಳನ್ನು ಮಾಡಿಕೊಂಡು ವಾಸವಾಗಿದ್ದಾರೆ. ಹೋಟೆಲ್, ಸೆಕ್ಯುರಿಟಿ ಸೇರಿದಂತೆ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ರೀಲ್ಸ್ ಹುಚ್ಚಿಗಾಗಿ ಸಿಟಿ ಎಲ್ಲಾ ತಿರುಗುಡುತ್ತಾ ವಿಧಾನಸೌಧ ಬಳಿ ಗಲಾಟೆ ಮಾಡಿಕೊಂಡಿದ್ದರು ಅಂತಾ ಗೊತ್ತಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *