ರಾತ್ರೋರಾತ್ರಿ ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸದಲ್ಲಿ ಮಹತ್ವದ ಬೆಳವಣಿಗೆ!

ರಾತ್ರೋರಾತ್ರಿ ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸದಲ್ಲಿ ಮಹತ್ವದ ಬೆಳವಣಿಗೆ!


ಬೆಂಗಳೂರು, ನವೆಂಬರ್ 22: ಒಂದೆಡೆ ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಹತ್ವದ ಕೆಲವು ಬೆಳವಣಿಗೆಗಳು ನಡೆದಿವೆ. ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಉತ್ಸವ ಮೂರ್ತಿ ಪಲ್ಲಕ್ಕಿ ಶುಕ್ರವಾರ ರಾತ್ರಿ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದು, ವಿಶೇಷ ಪೂಜೆ ಸಲ್ಲಿಸಲಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಸಿಪಿ ಯೋಗೇಶ್ವರ್ ಸೇರಿದಂತೆ ಕೆಲವು ಪ್ರಮುಖ ನಾಯಕರು ಡಿಕೆಶಿ ನಿವಾಸಕ್ಕೆ ಆಗಮಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಪಲ್ಲಕ್ಕಿ ವಾಹನ ಆಗಮಿಸಿದ್ದು, ಐವರು ಪೂಜಾರಿಗಳಿಂದ ಸುಮಾರು 1 ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ನೆರವೇರಿದೆ. ಇದೇ ಸಂದರ್ಭದಲ್ಲಿ ಆಪ್ತ ಶಾಸಕರ ಜತೆ ಡಿಕೆ ಶಿವಕುಮಾರ್ ಚರ್ಚೆ ಲಭ್ಯ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *