ಆರೋಪಿಗಳಿಂದ ವಶಪಡಿಸಿಕೊಳ್ಳಲಾಗದ ಹಣ
ಬೆಂಗಳೂರು, ನವೆಂಬರ್ 23: ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನ ತಡೆದು 7.11 ಕೋಟಿ ಹಣ ರಾಬರಿ ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ಸಾಲ ತೀರಿಸುವ ಸಲುವಾಗಿ ಆರೋಪಿಗಳು ದರೋಡೆ ಮಾಡಿದ್ದು, ಮಾಸ್ಟರ್ ಮೈಂಡ್ ಕ್ಸೇವಿಯರ್ ಸೇರಿ ಹಲವು ಸಾಲಗಾರರು ಎಂಬುದು ಗೊತ್ತಾಗಿದೆ. ಆರೋಪಿಗಳು ಇಸ್ಪೀಟು, ಜೂಜು ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದಾರೆ, ಹೇಗಾದರೂ ತೀರಿಸಿ ಎಟಿಎಂ ವಾಹನದ ದರೋಡೆಗೆ ಸ್ಕೇಚ್ ಹಾಕಿದ್ದರು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.
ಹಾಲಿ ಸಿಬ್ಬಂದಿಯೇ ದರೋಡೆಯ ಮಾಸ್ಟರ್ ಮೈಂಡ್
ಮುಖ್ಯ ಆರೋಪಿಗಳಾದ ಗೋಪಿ ಮತ್ತು ಕ್ಸೇವಿಯರ್ 17 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದರು. ಆ ಮೇಲಿನ ಕ್ಸೇವಿಯರ್ ಒಂದು ವರ್ಷದ ಹಿಂದೆಯೇ ಕೆಲಸ ಬಿಟ್ಟಿದ್ದ. ಕುಡಿತ, ಜೂಜಿನ ಚಟದಿಂದಾಗಿ ಆರೋಪಿಗಳು ಹಣಕಾಸು ಸಮಸ್ಯೆಗೆ ಸಿಲುಕಿದ್ದರು. ದರೋಡೆ ಹಣದಲ್ಲಿ ಸಾಲ ತೀರಿಸಿ, ಉಳಿದ ಹಣದಲ್ಲಿ ಐಷಾರಾಮಿ ಜೀವನ ನಡೆಸುವ ಪ್ಲ್ಯಾನ್ ಆರೋಪಿಗಳಾಗಿದ್ದರು. ಈ ಹಿನ್ನಲೆಯಲ್ಲಿ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಪ್ಲ್ಯಾನ್ ಪ್ರಕಾರ ಎಟಿಎಂ ವಾಹನ ದರೋಡೆ ಮಾಡಿದ್ದು, ಹಾಲಿ ಸಿಬ್ಬಂದಿ ಗೋಪಿಯೇ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎಂಬುದು ಬಹಿರಂಗವಾಗಿದೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ, ಮತ್ತೆ ಮೂವರನ್ನು ಹೈದರಾಬಾದ್‌ನಿಂದ ಕರೆತರಲಾಗಿದೆ.
ಇದನ್ನೂ ಓದಿ: ದರೋಡೆ ಕೇಸ್ ಬೋಧಿಸಿದ ಬೆಂಗಳೂರು ಪೊಲೀಸ್, ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ ಘೋಷಣೆ
ಪೊಲೀಸರಿಗೆ ಗೃಹಸಚಿವರ ಪ್ರಶಂಸೆ
ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ಪಶ್ಚಿಮ ವಿಭಾಗ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಮತ್ತು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಭೇಟಿ ನೀಡಿದರು. ದರೋಡೆ ಪ್ರಕರಣ ಭೇದಿಸಿರುವ ಬೆಂಗಳೂರು ಪೊಲೀಸರನ್ನ ತಮ್ಮ ನಿವಾಸಕ್ಕೆ ಕರೆಸಿ ನಗರ ಪೊಲೀಸರ ಕಾರ್ಯಕ್ಕೆ ಗೃಹಸಚಿವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ತನಿಖೆಯ ಬಗ್ಗೆ ಮಾಹಿತಿ ಕೂಡ ಇದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.