ಬಾಗಲಕೋಟೆ, ನವೆಂಬರ್ 23: ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಜಮಖಂಡಿಯ ಕಲ್ಲಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಡಿ.ಕೆ. ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಬಾಗಲಕೋಟೆ ಜಿಲ್ಲಾ ಯುವ ಅಧ್ಯಕ್ಷ ಕುಮಾರ್ ಆಲಗೂರು ಅವರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಅನೇಕ ಅಭಿಮಾನಿಗಳು ಮತ್ತು ಕಾರ್ಯಕರ್ತರು ಈ ಪೂಜೆಯಲ್ಲಿ ಭಾಗವಹಿಸಿದ್ದರು. ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಸಾವಿರದ ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.